ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ವಿಧಿವಶ

ಬೆಂಗಳೂರು : Tulu Times l ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಶನಿವಾರ (ಜುಲೈ 18) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಕಳೆದ ಮೂರು ದಿನಗಳಿಂದ ತೀವ್ರ ಉಸಿರಾಟದ ತೊಂದರೆ ಹಾಗೂ ಎದೆನೋವಿನಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನು ಬುಧವಾರ ರಾತ್ರಿ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೂ ಸ್ಪಂದಿಸದ ಅವರು ಶನಿವಾರ ಕೊನೆಯುಸಿರೆಳೆದರು.

ಚೆನ್ನಮ್ಮ ಅವರ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ವಿವಿಧ ಕ್ಷೇತ್ರಗಳ ವ್ಯಕ್ತಿಗಳು ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆಯಿಂದ ದೇವೇಗೌಡರ ಕುಟುಂಬಕ್ಕೆ ಅಪಾರ ದುಃಖ ಉಂಟಾಗಿದೆ.

Former Prime Minister H.D. Devegowda’s wife Chennamma passed away – ತುಳುಟೈಮ್ಸ್

ಇದನ್ನೂ ಓದಿ :ನಿಮ್ಮ ಕೈಗೆ ಬರಲಿವೆ ಹೊಸ ಪ್ಲಾಸ್ಟಿಕ್ ನೋಟುಗಳು; ಆರ್‌ಬಿಐ ಆರಂಭಿಸಿದೆ ಸಿದ್ಧತೆ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/a-9M9AlKf2k

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 221

You cannot copy content of this page