ನವದೆಹಲಿ: Tulu Times l ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆಗಳು ನಡೆಯುತ್ತಿದ್ದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯೇ ಅವರ ರಾಜೀನಾಮೆಯಾಗಿತ್ತು.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ತಮ್ಮ ಸಂದೇಶದಲ್ಲಿ ಧರ್ಮೇಂದ್ರ ಪ್ರಧಾನ್, ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವುದು ಮತ್ತು ಪ್ರತಿಭಟನೆಗಳನ್ನು ದೇಶವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳದಂತೆ ತಡೆಯುವುದು ನನ್ನ ಆದ್ಯ ಕರ್ತವ್ಯವಾಗಿದೆ. ಹೀಗಾಗಿ ನಾನು ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇದು ವೈಯಕ್ತಿಕ ಪ್ರತಿಷ್ಠೆಯ ವಿಷಯವಲ್ಲ, ಎಂದು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಸಾವಿರಾರು ವಿದ್ಯಾರ್ಥಿಗಳು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆಗೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ಬೆಂಬಲವೂ ವ್ಯಕ್ತವಾಗಿತ್ತು. ಪ್ರತಿಭಟನೆ ನಡೆಸುತ್ತಿದ್ದ ಕಾಕ್‌ರೋಚ್ ಜನತಾ ಪಾರ್ಟಿ ನಾಯಕರು, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಇಲ್ಲದೆ ಯಾವುದೇ ಮಾತುಕತೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಕೇಂದ್ರ ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವಿನ ಮೂರನೇ ಸುತ್ತಿನ ಮಾತುಕತೆಗೆ ಕೆಲವೇ ಗಂಟೆಗಳ ಮೊದಲು ಪ್ರಧಾನ್ ತಮ್ಮ ರಾಜೀನಾಮೆ ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಪ್ರತಿಭಟನೆಗಳ ಒತ್ತಡದ ನಡುವೆ ಹಿರಿಯ ಸಚಿವರೊಬ್ಬರು ರಾಜೀನಾಮೆ ನೀಡಿರುವ ಅಪರೂಪದ ಬೆಳವಣಿಗೆಯಾಗಿ ಇದನ್ನು ರಾಜಕೀಯ ವಲಯ ವಿಶ್ಲೇಷಿಸುತ್ತಿದೆ. ಇದೀಗ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ನಂತರ ಕೇಂದ್ರ ಸರ್ಕಾರದ ಮುಂದಿನ ನಡೆ ಏನಿರಲಿದೆ, ಹೊಸ ಶಿಕ್ಷಣ ಸಚಿವರ ನೇಮಕ ಯಾವಾಗ ನಡೆಯಲಿದೆ ಹಾಗೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಯಾವ ಹಂತ ತಲುಪಲಿದೆ ಎಂಬುದರ ಬಗ್ಗೆ ದೇಶಾದ್ಯಂತ ಕುತೂಹಲ ಮೂಡಿದೆ.
Resignation for the sake of students’ future: Dharmendra Pradhan’s statement – ತುಳುಟೈಮ್ಸ್
ಇದನ್ನೂ ಓದಿ :ಕುಸಿದುಬಿದ್ದ ಆದಂ ಅಣ್ಣ: ಸಂಪಾಜೆಯ ಜನಸೇವಕ ಇನ್ನಿಲ್ಲ!
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/5C4rFNGDf_w











