ಪಂಜ: Tulu Times l ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಜೇಸಿಐ ಪಂಜ ಪಂಚಶ್ರೀ ಹಾಗೂ ಲಯನ್ಸ್ ಕ್ಲಬ್ ಪಂಜ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ‘ಆಟಿ ನಂಪು–2026’ ಕಾರ್ಯಕ್ರಮದ ಅಂಗವಾಗಿ ಅರೆಭಾಷೆ ನಾಟಕ ಪ್ರದರ್ಶನವು ಆಗಸ್ಟ್ 9ರಂದು (ಭಾನುವಾರ) ನಡೆಯಲಿದೆ.
ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ಸಭಾಭವನದಲ್ಲಿ ರಾತ್ರಿ 6.30 ಗಂಟೆಯಿಂದ ಆರಂಭವಾಗಲಿರುವ ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅರೆಭಾಷೆಯ ವೈಶಿಷ್ಟ್ಯ, ಗ್ರಾಮೀಣ ಬದುಕು ಹಾಗೂ ಜನಪದ ಸಂಸ್ಕೃತಿಯನ್ನು ಬಿಂಬಿಸುವ ನಾಟಕವನ್ನು ಪ್ರೇಕ್ಷಕರ ಮುಂದೆ ತರಲಾಗುತ್ತಿದೆ.

ರಂಗ ನಿರ್ದೇಶಕರು ಲೋಕೇಶ್ ಊರುಬೈಲ್ ಅವರ ರಚನೆ ಮತ್ತು ನಿರ್ದೇಶನದಲ್ಲಿ ನಾಟಕ ಪ್ರದರ್ಶನಗೊಳ್ಳಲಿದ್ದು, ಅರೆಭಾಷೆಯ ಸೊಗಡು, ಭಾವನಾತ್ಮಕ ಸನ್ನಿವೇಶಗಳು ಹಾಗೂ ಸಾಮಾಜಿಕ ಸಂದೇಶಗಳನ್ನು ಒಳಗೊಂಡಿರುವ ಈ ನಾಟಕ ಪ್ರೇಕ್ಷಕರನ್ನು ರಂಜಿಸುವ ನಿರೀಕ್ಷೆಯಿದೆ. ಅರೆಭಾಷೆ ಭಾಷಿಕರ ಜೀವನಶೈಲಿ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ರಂಗಭೂಮಿಯ ಮೂಲಕ ಪರಿಚಯಿಸುವ ಉದ್ದೇಶದಿಂದ ಈ ಪ್ರದರ್ಶನ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
‘ಆಟಿ ನಂಪು–2026’ ಕಾರ್ಯಕ್ರಮವು ಆಟಿ ತಿಂಗಳ ಆಚರಣೆ, ಸಾಂಪ್ರದಾಯಿಕ ಆಹಾರ ಸಂಸ್ಕೃತಿ ಹಾಗೂ ಸ್ಥಳೀಯ ಪರಂಪರೆಯನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ದಿನವಿಡೀ ವಿವಿಧ ಕಾರ್ಯಕ್ರಮಗಳನ್ನು ಒಳಗೊಂಡಿದೆ. ಬೆಳಿಗ್ಗೆ ಆಟಿ ತಿಂಗಳ ವಿಶೇಷ ಆಹಾರ ಖಾದ್ಯ ಸ್ಪರ್ಧೆಗಳು ನಡೆಯಲಿದ್ದು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಭಾಗವಾಗಿ ಅರೆಭಾಷೆ ನಾಟಕ ಪ್ರದರ್ಶನ ಪ್ರಮುಖ ಆಕರ್ಷಣೆಯಾಗಲಿದೆ.
ಅರೆಭಾಷೆ ಸಾಹಿತ್ಯ, ಸಂಸ್ಕೃತಿ ಹಾಗೂ ರಂಗಭೂಮಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಲವು ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಪಂಜದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವೂ ಸ್ಥಳೀಯ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಲಿದೆ.
ಸುತ್ತಮುತ್ತಲಿನ ಗ್ರಾಮಗಳ ಅರೆಭಾಷಿಕರು, ಕಲಾಭಿಮಾನಿಗಳು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಆಟಿ ತಿಂಗಳ ಸಂಭ್ರಮಕ್ಕೆ ಸಾಂಸ್ಕೃತಿಕ ಮೆರುಗು ನೀಡಲಿರುವ ಈ ನಾಟಕ ಪ್ರದರ್ಶನವು ಪ್ರೇಕ್ಷಕರಿಗೆ ವಿಭಿನ್ನ ಅನುಭವವನ್ನು ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಲಾಗಿದೆ.
Arebhashe play to be staged in Panja on August 9; cultural flair for the ‘Aati Nampu–2026’ celebration – ತುಳುಟೈಮ್ಸ್
ಇದನ್ನೂ ಓದಿ :‘ರಾಮಾಯಣ’ ಟ್ರೈಲರ್‌ನಲ್ಲಿ ಯಶ್ ರಾವಣನಾಗಿ ರೌದ್ರಾವತಾರ; ಹನುಮಂತನ ಲುಕ್ ಇನ್ನೂ ಸಸ್ಪೆನ್ಸ್
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/IKW_z7twgxc











