ಸುಳ್ಯ : Tulu Times l ಸುಳ್ಯ ನೆಹರು ಮೆಮೋರಿಯಲ್ ಕಾಲೇಜು ಹಾಗೂ ಸುಳ್ಯ ಎನ್.ಎಂ.ಪಿ.ಯು.ಸಿ ಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ವ್ಯಸನ ವಿರೋಧಿ ಜಾಗೃತಿ ಕಾರ್ಯಕ್ರಮ–2026 ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ, ವ್ಯಸನಮುಕ್ತ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ವಿದ್ಯಾರ್ಥಿಗಳು ದೇಶದ ಭವಿಷ್ಯವಾಗಿದ್ದು, ಯಾವುದೇ ರೀತಿಯ ಮಾದಕ ವ್ಯಸನಗಳಿಗೆ ಬಲಿಯಾಗದೆ ತಮ್ಮ ಗುರಿಯತ್ತ ಸಾಗಬೇಕು ಎಂದು ಕರೆ ನೀಡಿದರು. ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಜಾಗೃತಿ ದೂತನಾಗಿ ಕಾರ್ಯನಿರ್ವಹಿಸಬೇಕೆಂದು ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಅವರು, ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದ್ದು, ಯುವಜನತೆ ಮಾದಕ ವ್ಯಸನ ನಿರ್ಮೂಲನೆಗೆ ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಹೇಳಿದರು.
ಸುಳ್ಯ ತಹಶೀಲ್ದಾರ್ ಮಂಜುಳಾ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ಮಾದಕ ವ್ಯಸನ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸಮಾಜದಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯಕ್ ಅವರು ಮಾದಕ ವಸ್ತುಗಳ ಬಳಕೆ, ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದ ಕಾನೂನುಗಳು ಮತ್ತು ಶಿಕ್ಷೆಗಳ ಬಗ್ಗೆ ಮಾಹಿತಿ ನೀಡಿದರು. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.
ಸುಳ್ಯ ಪೊಲೀಸ್ ಉಪನಿರೀಕ್ಷಕ ಸಂತೋಷ್ ಬಿ. ಅವರು ವಿವಿಧ ಮಾದಕ ವಸ್ತುಗಳ ದುಷ್ಪರಿಣಾಮಗಳು, ಆರೋಗ್ಯದ ಮೇಲೆ ಅವು ಬೀರುವ ಪರಿಣಾಮಗಳು ಹಾಗೂ ಸ್ನೇಹಿತರ ಒತ್ತಡಕ್ಕೆ ಮಣಿಯದೆ ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲ್, ಎನ್.ಎಂ.ಪಿ.ಯು.ಸಿ. ಪ್ರಾಂಶುಪಾಲೆ ಮಿಥಾಲಿ ಪಿ. ರೈ, ಉಪನ್ಯಾಸಕರು, ಸಿಬ್ಬಂದಿ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Sullia: Anti-drug abuse awareness program at Nehru Memorial College. – ತುಳುಟೈಮ್ಸ್
ಇದನ್ನೂ ಓದಿ :ಡಿಎನ್ಎ ವರದಿಯಲ್ಲಿ ಬಯಲಾಯ್ತು ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ರಹಸ್ಯ
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/IKW_z7twgxc











