ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಸರ್ಕಾರಿ ಶಾಲೆಗಳಲ್ಲಿ ಎಐ ವಿಷಯ ಬೋಧನೆಗೆ ಒತ್ತು; ತಿಂಗಳಿಗೆ 20 ಸಾವಿರ ರೂ. ಗೌರವಧನ

ಬೆಂಗಳೂರು: Tulu Times l ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ಶಿಕ್ಷಣವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಹೊಸದಾಗಿ ಎಐ ವಿಷಯಕ್ಕೆ ಅನುಮೋದನೆ ಪಡೆದ ಹಾಗೂ ಎಐ ಶಿಕ್ಷಣ ಜಾರಿಗೊಳ್ಳುವ ಎಲ್ಲಾ ಶಾಲೆಗಳಲ್ಲಿ ಎಐ ವಿಷಯ ಬೋಧನೆಗಾಗಿ ಪ್ರತಿ ಶಾಲೆಗೆ ಒಬ್ಬ ಎಐ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಇಲಾಖೆಯ ಆದೇಶದ ಪ್ರಕಾರ, ಎಐ ಅತಿಥಿ ಶಿಕ್ಷಕರ ನೇಮಕಾತಿಯನ್ನು ಶಾಲಾ ಮಟ್ಟದಲ್ಲಿಯೇ ಪಾರದರ್ಶಕವಾಗಿ ನಡೆಸಬೇಕು. ನೇಮಕಗೊಳ್ಳುವ ಪ್ರತಿ ಅತಿಥಿ ಶಿಕ್ಷಕರಿಗೆ ತಿಂಗಳಿಗೆ ₹20,000 ಗೌರವಧನ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆಗಾಗಿ ಎಸ್‌ಡಿಎಂಸಿ (ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ) ಅಧ್ಯಕ್ಷರ ನೇತೃತ್ವದಲ್ಲಿ ಆಯ್ಕೆ ಸಮಿತಿಯನ್ನು ರಚಿಸಬೇಕು. ಸಾರ್ವಜನಿಕವಾಗಿ ಅರ್ಜಿಗಳನ್ನು ಆಹ್ವಾನಿಸಿ, ಸರ್ಕಾರ ನಿಗದಿಪಡಿಸಿರುವ ವಿದ್ಯಾರ್ಹತೆ ಮತ್ತು ಆಯ್ಕೆ ಮಾನದಂಡಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಸೂಚಿಸಲಾಗಿದೆ.

ಆಯ್ಕೆಗೊಂಡ ಅಭ್ಯರ್ಥಿಗಳ ಪಟ್ಟಿಯನ್ನು ಎಸ್‌ಡಿಎಂಸಿ ಸಭೆಯಲ್ಲಿ ಅನುಮೋದಿಸಿದ ಬಳಿಕ ಸಂಬಂಧಿತ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಅವರ ಅನುಮೋದನೆಗೆ ಸಲ್ಲಿಸಬೇಕು. ಬಿಇಒ ಅವರ ಒಪ್ಪಿಗೆ ದೊರೆತ ನಂತರವೇ ನೇಮಕಾತಿ ಅಂತಿಮವಾಗಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿ ಡಿಜಿಟಲ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಸರ್ಕಾರ, ವಿದ್ಯಾರ್ಥಿಗಳನ್ನು ಭವಿಷ್ಯದ ತಂತ್ರಜ್ಞಾನಗಳಿಗೆ ಸಜ್ಜುಗೊಳಿಸುವ ಉದ್ದೇಶದಿಂದ ಶಾಲಾ ಹಂತದಲ್ಲೇ ಎಐ ಶಿಕ್ಷಣ ಪರಿಚಯಿಸುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆಯ ಮೂಲಭೂತ ಪರಿಕಲ್ಪನೆಗಳು, ತಂತ್ರಜ್ಞಾನ ಬಳಕೆ ಹಾಗೂ ನವೀನ ಕೌಶಲ್ಯಗಳ ಕುರಿತು ಅರಿವು ಮೂಡಲಿದೆ ಎಂಬ ನಿರೀಕ್ಷೆಯಿದೆ. ಶಿಕ್ಷಣ ತಜ್ಞರ ಅಭಿಪ್ರಾಯದಂತೆ, ಶಾಲಾ ಹಂತದಲ್ಲಿಯೇ ಎಐ ಶಿಕ್ಷಣ ಆರಂಭವಾಗುವುದರಿಂದ ವಿದ್ಯಾರ್ಥಿಗಳಲ್ಲಿ ಸಮಸ್ಯೆ ಪರಿಹಾರ ಕೌಶಲ್ಯ, ತಾರ್ಕಿಕ ಚಿಂತನೆ ಹಾಗೂ ಡಿಜಿಟಲ್ ಸಾಮರ್ಥ್ಯ ವೃದ್ಧಿಯಾಗಲಿದ್ದು, ಭವಿಷ್ಯದ ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗೆ ಅಗತ್ಯವಾದ ತಾಂತ್ರಿಕ ನೆಲೆ ಸಿದ್ಧವಾಗಲಿದೆ. ಈ ಕ್ರಮವು ರಾಜ್ಯದ ಸರ್ಕಾರಿ ಶಾಲಾ ಶಿಕ್ಷಣದಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

Emphasis on teaching AI in government schools; monthly honorarium of ₹20,000 – ತುಳುಟೈಮ್ಸ್

ಇದನ್ನೂ ಓದಿ :ಲೋಕಸಭೆಯಲ್ಲಿ ಗದ್ದಲದ ನಡುವೆ ಜನನ-ಮರಣ ನೋಂದಣಿ ತಿದ್ದುಪಡಿ ಮಸೂದೆ ಪಾಸ್

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtube.com/shorts/GYvo3gWwSrk?feature=share

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 209

You cannot copy content of this page