ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ: ಕೀ ಉತ್ತರ ಪ್ರಕಟ

ಬೆಂಗಳೂರು: Tulu Times l ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಾಥಮಿಕ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಆಗಸ್ಟ್ 2ರಂದು ನಡೆದ ಸಾಮಾನ್ಯ ಜ್ಞಾನ ವಿಷಯದ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಕೀ ಉತ್ತರಗಳನ್ನು ಕೆಇಎ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ತಮ್ಮ ಉತ್ತರಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.

ಕೀ ಉತ್ತರಗಳ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಅಗತ್ಯ ದಾಖಲೆ ಹಾಗೂ ಸೂಕ್ತ ಆಧಾರಗಳೊಂದಿಗೆ ಆನ್‌ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳನ್ನು ಆಗಸ್ಟ್ 6ರ ಬೆಳಿಗ್ಗೆ 10.30 ಗಂಟೆಯೊಳಗೆ ಮಾತ್ರ ಸಲ್ಲಿಸಬಹುದಾಗಿದ್ದು, ನಿಗದಿತ ಅವಧಿಯ ನಂತರ ಸಲ್ಲಿಕೆಯಾಗುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ತಿಳಿಸಿದೆ.

ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳನ್ನು ಕೆಇಎ ಅಧಿಕೃತ ವೆಬ್‌ಪೋರ್ಟಲ್‌ ; https://cetonline.karnataka.gov.in/kea/ ಮೂಲಕ ಸಲ್ಲಿಸಬೇಕು. ಆಕ್ಷೇಪಣೆ ಸಲ್ಲಿಸುವ ವೇಳೆ ಪ್ರಶ್ನೆ ಸಂಖ್ಯೆ, ಸರಿಯಾದ ಉತ್ತರಕ್ಕೆ ಸಂಬಂಧಿಸಿದ ದಾಖಲಾತಿ ಹಾಗೂ ಅಗತ್ಯ ಮಾಹಿತಿಯನ್ನು ಸ್ಪಷ್ಟವಾಗಿ ನಮೂದಿಸುವಂತೆ ಸೂಚಿಸಲಾಗಿದೆ.

ನಿಗದಿತ ಅವಧಿಯಲ್ಲಿ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿ ಪರಿಶೀಲಿಸಿದ ಬಳಿಕ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗುವುದು. ಅದರ ಆಧಾರದ ಮೇಲೆ ಫಲಿತಾಂಶ ಸಿದ್ಧಪಡಿಸಿ ಮುಂದಿನ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.
ಕಲ್ಯಾಣ ಕರ್ನಾಟಕ ವೃಂದದ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಸಾವಿರಾರು ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿದ್ದು, ಕೀ ಉತ್ತರ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ತಮ್ಮ ಉತ್ತರಗಳನ್ನು ಪರಿಶೀಲಿಸಿ ಅಗತ್ಯವಿದ್ದರೆ ನಿಗದಿತ ಅವಧಿಯೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಕೆಇಎ ಅಭ್ಯರ್ಥಿಗಳಿಗೆ ಸೂಚಿಸಿದೆ.

Civil Police Constable Recruitment Exam: Answer Key Released – ತುಳುಟೈಮ್ಸ್

ಇದನ್ನೂ ಓದಿ :ಸೇವೆಯಲ್ಲಿರುವ ಶಿಕ್ಷಕರಿಗೂ ಟಿಇಟಿ ಕಡ್ಡಾಯ; 2028ರ ಆಗಸ್ಟ್‌ವರೆಗೆ ಅವಕಾಶ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/IKW_z7twgxc

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 211

You cannot copy content of this page