ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಹೈಕೋರ್ಟ್ ಮಧ್ಯಂತರ ಆದೇಶ: ಶಾಲಾ ಕ್ರೀಡಾಕೂಟಗಳು ತಾತ್ಕಾಲಿಕ ಮುಂದೂಡಿಕೆ

ಬೆಂಗಳೂರು: Tulu Times l ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 2026–27ನೇ ಶೈಕ್ಷಣಿಕ ಸಾಲಿಗೆ ಆಯೋಜಿಸಲು ಉದ್ದೇಶಿಸಿದ್ದ ಕ್ರೀಡಾಕೂಟಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ.

ಜುಲೈ 14, 2026ರಂದು ಶಾಲಾ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಕ್ರೀಡಾಕೂಟಗಳನ್ನು ಆಯೋಜಿಸುವ ಕುರಿತು ಸುತ್ತೋಲೆ ಹೊರಡಿಸಿತ್ತು. ಆದರೆ, ಈ ಸುತ್ತೋಲೆಯನ್ನು ಪ್ರಶ್ನಿಸಿ ಕೆಲವು ವಿದ್ಯಾರ್ಥಿಗಳು ತಮ್ಮ ಪೋಷಕರ ಮೂಲಕ ಕರ್ನಾಟಕ ಹೈಕೋರ್ಟ್‌ನಲ್ಲಿ WP ಸಂಖ್ಯೆ 23143/2026 ಅರ್ಜಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಜುಲೈ 30ರಂದು ನಡೆಸಿದ ಮಾನ್ಯ ಕರ್ನಾಟಕ ಹೈಕೋರ್ಟ್, ಜುಲೈ 14ರಂದು ಹೊರಡಿಸಿದ್ದ ಕ್ರೀಡಾ ಸುತ್ತೋಲೆಯ ಜಾರಿಗೆ ಮಧ್ಯಂತರ ತಡೆ ನೀಡಿದೆ. ನ್ಯಾಯಾಲಯದ ಈ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆ ಕ್ರೀಡಾಕೂಟಗಳನ್ನು ತಾತ್ಕಾಲಿಕವಾಗಿ ಮುಂದೂಡುವ ನಿರ್ಧಾರ ಕೈಗೊಂಡಿದೆ.

ನ್ಯಾಯಾಲಯದ ಅಂತಿಮ ತೀರ್ಪು ಅಥವಾ ಸರ್ಕಾರ ಹಾಗೂ ಸಕ್ಷಮ ಪ್ರಾಧಿಕಾರದಿಂದ ಹೊಸ ನಿರ್ದೇಶನಗಳು ಹೊರಬರುವವರೆಗೆ ಯಾವುದೇ ಶಾಲೆಯಲ್ಲಿ ಕ್ರೀಡಾಕೂಟಗಳನ್ನು ನಡೆಸಬಾರದು ಎಂದು ಆಯುಕ್ತರು ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು (ಆಡಳಿತ), ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಕರಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ಸೂಚಿಸಲಾಗಿದೆ.

ಶಾಲೆಗಳು ಇಲಾಖೆಯ ಮುಂದಿನ ಆದೇಶದವರೆಗೆ ಕ್ರೀಡಾಕೂಟಗಳ ಆಯೋಜನೆಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳನ್ನು ಕೈಗೊಳ್ಳದಂತೆ ಸೂಚಿಸಲಾಗಿದ್ದು, ನ್ಯಾಯಾಲಯದ ಅಂತಿಮ ಆದೇಶದ ಬಳಿಕ ಮುಂದಿನ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

High Court interim order: School sports meets temporarily postponed – ತುಳುಟೈಮ್ಸ್

ಇದನ್ನೂ ಓದಿ :ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ಡಾ. ಕುರುಂಜಿ ವೆಂಕಟ್ರಮಣ ಗೌಡರಿಗೆ ನುಡಿ ನಮನ

==

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/IKW_z7twgxc

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 220

You cannot copy content of this page