ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಜಿಲ್ಲಾ ನ್ಯಾಯಾಲಯದಲ್ಲಿ 21 ಶೀಘ್ರಲಿಪಿಗಾರ ಹುದ್ದೆ; ಸೆ.15 ಅರ್ಜಿ ಸಲ್ಲಿಕೆಗೆ ಕೊನೆಯ ದಿನ

ಉದ್ಯೋಗ : Tulu Times l ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಗ್ರೇಡ್-3 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 21 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ಅರ್ಹತೆ ಹೊಂದಿದ್ದರೆ ಸೆಪ್ಟೆಂಬರ್ 15ರೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದರೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಕಡ್ಡಾಯ. ಕಂಪ್ಯೂಟರ್ ಜ್ಞಾನವೂ ಅಗತ್ಯವಾಗಿದೆ.

ವಯೋಮಿತಿ ;

ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ. ನಿಯಮಾನುಸಾರ ಅರ್ಹ ವರ್ಗಗಳಿಗೆ ಹೆಚ್ಚುವರಿ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ವೇತನ ಎಷ್ಟು?

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹44,425ರಿಂದ ₹83,700 ವೇತನ ಶ್ರೇಣಿ ದೊರೆಯಲಿದ್ದು, ಸರ್ಕಾರದ ನಿಯಮಾನುಸಾರ ಇತರ ಭತ್ಯೆಗಳು ಅನ್ವಯವಾಗಲಿವೆ.

ಅಭ್ಯರ್ಥಿಗಳಿಗೆ ಪ್ರತಿ ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಕನ್ನಡ ಮತ್ತು ಇಂಗ್ಲಿಷ್ ಉಕ್ತಲೇಖನ ಪರೀಕ್ಷೆ ನಡೆಸಲಾಗುತ್ತದೆ. ಇದನ್ನು 45 ನಿಮಿಷಗಳಲ್ಲಿ ಕಂಪ್ಯೂಟರ್‌ನಲ್ಲಿ ಬೆರಳಚ್ಚು ಮಾಡಬೇಕಾಗುತ್ತದೆ. ಕನ್ನಡ ಮತ್ತು ಇಂಗ್ಲಿಷ್ ಪರೀಕ್ಷೆಗಳಿಗೆ ತಲಾ 100 ಅಂಕ ನಿಗದಿಪಡಿಸಲಾಗಿದ್ದು, ಅರ್ಹತೆ ಪಡೆಯಲು ಪ್ರತಿ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಯ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.

Process to purchase 15,000 new buses set in motion: Transport Minister Byrathi Suresh
Credit to original source

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹200, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ₹100 ಅರ್ಜಿ ಶುಲ್ಕವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅರ್ಹ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 15 ಎಂದು ಪ್ರಕಟಣೆ ತಿಳಿಸಿದೆ.

21 Stenographer posts in District Court; September 15 is the last date to apply – ತುಳುಟೈಮ್ಸ್

ಇದನ್ನೂ ಓದಿ :ಕೆಪಿಎಸ್‌ಗಳಿಗೆ ಬಂಪರ್ ಅನುದಾನ : 220 ಕೋಟಿ ರೂ.‌ ಬಿಡುಗಡೆ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/f6_23OBB8ws

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 220

You cannot copy content of this page