ಸುಳ್ಯ: Tulu Times l ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಸುಳ್ಯ ಹಾಗೂ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ, ಸುಳ್ಯ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತಗಾಯನ ಸ್ಪರ್ಧೆ ಆಯೋಜಿಸಲಾಗಿದೆ. ಕಾರ್ಯಕ್ರಮವು ಆಗಸ್ಟ್ 27ರಂದು ಗುರುವಾರ ಬೆಳಗ್ಗೆ ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ, ಸುಳ್ಯದಲ್ಲಿ ನಡೆಯಲಿದೆ.
ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ರಾಷ್ಟ್ರಾಭಿಮಾನ ಹಾಗೂ ಸಾಂಸ್ಕೃತಿಕ ಪ್ರತಿಭೆಯನ್ನು ಬೆಳೆಸುವ ಉದ್ದೇಶದಿಂದ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ದೇಶಭಕ್ತಿ ಗೀತೆಗಳ ಮೂಲಕ ಮಕ್ಕಳಲ್ಲಿ ರಾಷ್ಟ್ರದ ಬಗ್ಗೆ ಗೌರವ ಮತ್ತು ಜವಾಬ್ದಾರಿಯ ಮನೋಭಾವ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಸುಳ್ಯ ಇದರ ಅಧ್ಯಕ್ಷರು ಶಶಿಧರ ಎಂ.ಜೆ. ವಹಿಸಲಿದ್ದಾರೆ. ಉದ್ಯಮಿ ಅಶೋಕ ಪ್ರಭು, ಸುಳ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್. ಹರಗಿ, ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ರೊ. ರಾಘೇಶ್ ರಾಘವ್, ಪಿ.ಎಂ.ಶ್ರೀ ಹಿರಿಯ ಪ್ರಾಥಮಿಕ ಶಾಲೆ ಸುಳ್ಯದ ಮುಖ್ಯ ಶಿಕ್ಷಕ ಚಂದ್ರಶೇಖರ ಪಿ. ಹಾಗೂ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿರಾಜ್ ಅಡ್ಕಾರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಸುಳ್ಯದ ಪ್ರಧಾನ ಕಾರ್ಯದರ್ಶಿ ಮಮತಾ ಕೆ., ಕೋಶಾಧಿಕಾರಿ ರೇವತಿ ಪಿ., ಸ್ಥಳೀಯ ಸಂಸ್ಥೆ ಪಂಜದ ಅಧ್ಯಕ್ಷ ಶಶಿಧರ ಎಂ.ಜೆ. ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆ ಕಲ್ಪಿಸುವುದರ ಜೊತೆಗೆ, ದೇಶಭಕ್ತಿ ಗೀತಗಾಯನದ ಮೂಲಕ ರಾಷ್ಟ್ರೀಯ ಏಕತೆ, ಶಿಸ್ತು ಮತ್ತು ಸೇವಾ ಮನೋಭಾವವನ್ನು ಬೆಳೆಸುವ ಪ್ರಯತ್ನ ಇದಾಗಿದೆ. ಕಾರ್ಯಕ್ರಮಕ್ಕೆ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ಪರ್ಧಾಳುಗಳನ್ನು ಪ್ರೋತ್ಸಾಹಿಸುವಂತೆ ಆಯೋಜಕರು ಕೋರಿದ್ದಾರೆ.
Patriotic song competition in Sullia today – ತುಳುಟೈಮ್ಸ್
ಇದನ್ನೂ ಓದಿ :ತಕ್ಷಣ ಫಲ ಸಿಗದಿದ್ದರೆ ನಿರಾಶರಾಗಬೇಡಿ; ತಾಳ್ಮೆಯ ಶಕ್ತಿ ಇದು!
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/aaO7S8GGYgs











