ಬ್ರೇಕಿಂಗ್ ನ್ಯೂಸ್
ಸುಳ್ಯ

ಸುಳ್ಯ : ದೇಶಭಕ್ತಿ ಗೀತಗಾಯನ ಸ್ಪರ್ಧೆ ಉದ್ಘಾಟನೆ

ಸುಳ್ಯ: Tulu Times l ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಸುಳ್ಯ ಹಾಗೂ ಪಿ.ಎಂ.ಶ್ರೀ ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲೆ, ಸುಳ್ಯ ಇವರ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಬುಲ್‌ಬುಲ್ಸ್, ಕಬ್ಸ್, ಸ್ಕೌಟ್ಸ್ ಹಾಗೂ ಗೈಡ್ಸ್ ವಿಭಾಗದ ದೇಶಭಕ್ತಿ ಗೀತಗಾಯನ ಸ್ಪರ್ಧೆಯು ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆಯೊಂದಿಗೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ಅಶೋಕ್ ಪ್ರಭು ಸುಳ್ಯ, ಮಕ್ಕಳಿಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಮೂಲಕ ಮಕ್ಕಳು ಹೆಚ್ಚಿನ ಜ್ಞಾನ ಹಾಗೂ ಜೀವನ ಕೌಶಲ್ಯಗಳನ್ನು ಪಡೆದುಕೊಳ್ಳಬಹುದು. ಈ ಸಂಸ್ಥೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ. ಸಂಸ್ಥೆಯ ಮೂಲಕ ಉತ್ತಮ ಶಿಕ್ಷಣ ಹಾಗೂ ಮೌಲ್ಯಗಳನ್ನು ಪಡೆದು ಒಳ್ಳೆಯ ವ್ಯಕ್ತಿಗಳಾಗಿ, ನಾಡಿಗೆ ಉತ್ತಮ ಹೆಸರನ್ನು ತರುವಂತಾಗಬೇಕು. ಜ್ಞಾನದ ಜ್ಯೋತಿಯನ್ನು ಬೆಳಗಿಸಿ ಅದರ ಬೆಳಕನ್ನು ಸಮಾಜಕ್ಕೆ ಹಾಗೂ ನಾಡಿಗೆ ನೀಡಬೇಕು ಎಂದು ಅವರು ಕರೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್. ಹರಗಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಧ್ಯೇಯೋದ್ದೇಶಗಳನ್ನು ಕೇಳುವಾಗ ಹೆಮ್ಮೆಯಾಗುತ್ತದೆ. ವ್ಯಕ್ತಿ ವಿಕಸನ, ಶಿಸ್ತು, ಸಂಯಮ, ಗೌರವ ಹಾಗೂ ವೈಯಕ್ತಿಕ ಶಿಸ್ತನ್ನು ಬೆಳೆಸುವಲ್ಲಿ ಸಂಸ್ಥೆಯ ಪಾತ್ರ ಮಹತ್ವದ್ದಾಗಿದೆ. ಸಮಾಜ ಮತ್ತು ಸಮುದಾಯಕ್ಕೆ ಕೊಡುಗೆ ನೀಡುವ ಭಾರತದ ಹೆಮ್ಮೆಯ ಸಂಸ್ಥೆಯಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯನಿರ್ವಹಿಸುತ್ತಿದೆ. ಇದು ಅತ್ಯಂತ ಅದ್ಭುತವಾದ ಸಂಘಟನೆಯಾಗಿದೆ ಎಂದು ಅವರು ಶ್ಲಾಘಿಸಿದರು.

Process to purchase 15,000 new buses set in motion: Transport Minister Byrathi Suresh
Credit to original source

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಸುಳ್ಯದ ಅಧ್ಯಕ್ಷ ಶಶಿಧರ ಎಂ.ಜೆ. ಮಾತನಾಡಿ, ಕಾರ್ಯಕ್ರಮಕ್ಕೆ ಸಹಕಾರ ನೀಡಿದ ದಾನಿಗಳು ಹಾಗೂ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ, ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರು ರಾಜು ಪಂಡಿತ್, ಮಾಧವ ಮಡಪ್ಪಾಡಿ, ಪಿ.ಎಂ.ಶ್ರೀ ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಸುನಂದಾ ಶೆಟ್ಟಿ, ಗೈಡ್ಸ್ ಜಿಲ್ಲಾ ಆಯುಕ್ತರು ಪ್ರೇಮಲತಾ, ಎಸ್‌ಡಿಎಂಸಿ ಅಧ್ಯಕ್ಷ ರವಿರಾಜ್ ಅಡ್ಕಾರು ಉಪಸ್ಥಿತರಿದ್ದರು.

ಸುಳ್ಯ ಸ್ಥಳೀಯ ಸಂಸ್ಥೆ, ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸುಳ್ಯ ಕ್ಲಸ್ಟರ್ ಸಿಆರ್ ಪಿ ಮಮತಾ ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೆಪಿಎಸ್ ಸುಳ್ಯದ ಸಹಶಿಕ್ಷಕಿ ಹಾಗೂ ಹಿಮಾಲಯ ವುಡ್‌ಬ್ಯಾಡ್ಜ್ ತರಬೇತಿ ಪಡೆದ ಪೂರ್ಣಿಮಾ ತಂಟೆಪ್ಪಾಡಿ ಸ್ವಾಗತಿಸಿದರು. ರೋಟರಿ ಶಾಲೆಯ ಕಲಾ ಶಿಕ್ಷಕ ಹಾಗೂ ಸ್ಕೌಟ್ಸ್ ಶಿಕ್ಷಕ ಶ್ರೀಹರಿ ಪೈಂದೋಡಿ ವಂದನಾರ್ಪಣೆ ಸಲ್ಲಿಸಿದರು. ಸ್ಕೌಟ್ಸ್ ಶಿಕ್ಷಕರು ಸವೇರಪುರ ಜೀವನ್ ಕಾರ್ಯಕ್ರಮ ನಿರೂಪಿಸಿದರು.

Sullia: Patriotic song singing competition inaugurated – ತುಳುಟೈಮ್ಸ್

ಇದನ್ನೂ ಓದಿ :ಸುಳ್ಯದಲ್ಲಿ ಇಂದು (ಆ.27) ದೇಶಭಕ್ತಿ ಗೀತಗಾಯನ ಸ್ಪರ್ಧೆ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/aaO7S8GGYgs

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 14

You cannot copy content of this page