ಬ್ರೇಕಿಂಗ್ ನ್ಯೂಸ್
ದೇಶ

Belagavi : ಸರ್ಕಾರಕ್ಕೆ ರೈತರ ಪರ ಕಾಳಜಿಯಿಲ್ಲ : ಕಬ್ಬಿನ ಬೆಲೆ ನಿಗದಿಗಾಗಿ‌ ಮುಗಿಲು ಮುಟ್ಟಿದ ರೈತರ ಆಕ್ರೋಶ

Belagavi : ಕಬ್ಬಿಗೆ ಬೆಲೆ ನಿಗದಿ ಮಾಡುವಂತೆ ಅನ್ನದಾತರ ಹೋರಾಟ ನಿನ್ನೆ ಅಧೋರಾತ್ರಿಯಿಂದ ಬುಗಿಲೆಬ್ಬಿದೆ. ಜತ್ತ – ಜಂಬೋಣಿ ಹೆದ್ದಾರಿ ತಡೆದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಧರಣಿ ಮಾಡಲಾಗಿರುತ್ತದೆ. ರಾಜ್ಯ ಸರ್ಕಾರದ ವಿರುದ್ಧ ಪ್ರಬಲ ಹೋರಾಟದಲ್ಲಿ ರೈತರು ಕೆಂಡಾಂಮಂಡಲವಾಗಿದ್ದು, ಈ ಹೋರಾಟಕ್ಕೆ ಕರವೇ ಶಿವರಾಮೇಗೌಡ ಬಣ ಕೂಡಾ ಬೆಂಬಲ‌ ನೀಡಿರುತ್ತದೆ.

ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಐದು ದಿನಗಳಿಂದ ರಾತ್ರಿ ನಿರಂತರ ಹೋರಾಟದ ಮೇರೆಯೂ ಸರ್ಕಾರವು ನ್ಯಾಯ ಕೊಡಲು ವಿಫಲವಾಗಿದೆ ಎಂದು ರೈತರು ತಮ್ಮ ಅಳಲನ್ನು ತೋಡಿಕೊಂಡಿರುತ್ತಾರೆ. ಈ ಹೋರಾಟಕ್ಕೆ ಸಾಥ್ ನೀಡಲು ಬೆಳಗಾವಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತೆರಳಿ, ಪ್ರತಿಭಟನೆಯಲ್ಲೂ ಭಾಗಿಯಾಗಿ,’ಪ್ರತಿ ಟನ್ ಕಬ್ಬಿಗೆ ₹3,500 ನೀಡುವಂತೆ ಗುರ್ಲಾಪುರ ಬಳಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವೇ ಮುಂದಾಳತ್ವ ವಹಿಸಿ ಅವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕಿತ್ತು. ಆದರೆ, ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಲು ಇಲ್ಲಿಗೆ ಬಂದಿದ್ದೇವೆ’ ಎಂದು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದರು.

ಇದನ್ನೂ ಓದಿ : Belthangady: ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಕೋರ್ಟ್‌ಗೆ ಹಾಜರ್!

ಧಾರಾಕಾರ ಮಳೆಯಿಂದ ರೈತರು ತೊಂದರೆಗೀಡಾಗಿ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಕಂದಾಯ ಸಚಿವರು ಮತ್ತು ಕೃಷಿ ಸಚಿವರು ಉತ್ತರ ಕರ್ನಾಟಕದಲ್ಲಿ ಪ್ರವಾಸ ಮಾಡಲಿಲ್ಲ. ಹಾಗೂ ಸರ್ಕಾರಕ್ಕೆ ರೈತರ ಪರ ಕಾಳಜಿ ಇಲ್ಲ. ಇದರಿಂದ ಕಬ್ಬಿನ ದರಕ್ಕಾಗಿ ರೈತರು ಮತ್ತೆ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ’ ಎಂದು ಆರೋಪಿಸಿದರು.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/9SPfLPmVEeU?si=Gu55SPqpoprpBL6I

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 14

You cannot copy content of this page