ಸುಳ್ಯ: Tulu Times l ಪಿಎಂಶ್ರೀ ಕೆಪಿಎಸ್ ಸುಳ್ಯ ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕವಾಗಿ ಆರು ತಿಂಗಳ ಅವಧಿಗೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಶಾಲಾ ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಸ್ಪೋಕನ್ ಇಂಗ್ಲಿಷ್ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎ ಪದವಿಯಲ್ಲಿ ಐಚ್ಛಿಕ ವಿಷಯವಾಗಿ ಇಂಗ್ಲಿಷ್ ಅಧ್ಯಯನ ಮಾಡಿರಬೇಕು. ಅಥವಾ ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಪದವಿ (ಎಂ.ಎ. ಇಂಗ್ಲಿಷ್) ಪಡೆದಿರಬೇಕು. ಅಭ್ಯರ್ಥಿಗಳ ವಯೋಮಿತಿ 25ರಿಂದ 55 ವರ್ಷಗಳೊಳಗಿರಬೇಕು.
ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಸೆಪ್ಟೆಂಬರ್ 2026ರಿಂದ ಫೆಬ್ರವರಿ 2027ರವರೆಗೆ ಆರು ತಿಂಗಳ ಅವಧಿಗೆ ಮಾತ್ರ ಇರಲಿದೆ. ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ ₹12,000 ಗೌರವಧನ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 3, 2026ರ ಸಂಜೆ 5 ಗಂಟೆಯೊಳಗೆ ಶಾಲೆಗೆ ಖುದ್ದಾಗಿ ಸಲ್ಲಿಸಬೇಕು. ಅರ್ಜಿಗಳ ಪರಿಶೀಲನೆಯ ಬಳಿಕ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನ ಹಾಗೂ ಮಾದರಿ ಪಾಠ ವೀಕ್ಷಣೆಗೆ ಆಹ್ವಾನಿಸಲಾಗುವುದು.

ಸೆಪ್ಟೆಂಬರ್ 4, 2026ರಂದು ಬೆಳಿಗ್ಗೆ 10 ಗಂಟೆಗೆ ಶಾಲೆಯಲ್ಲಿ ನೇರ ಸಂದರ್ಶನ ಹಾಗೂ ಮಾದರಿ ಪಾಠ ವೀಕ್ಷಣೆ ನಡೆಯಲಿದೆ. ಈ ಪ್ರಕ್ರಿಯೆಯ ಆಧಾರದ ಮೇಲೆ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಿ ನೇಮಕಾತಿ ಮಾಡಿಕೊಳ್ಳಲಾಗುವುದು. ಇಂಗ್ಲಿಷ್ ಭಾಷಾ ಬೋಧನೆಯಲ್ಲಿ ಆಸಕ್ತಿ ಹೊಂದಿರುವ ಹಾಗೂ ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಸ್ಪೋಕನ್ ಇಂಗ್ಲಿಷ್ ಕಲಿಸಲು ಉತ್ಸುಕರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9483923043 ಅಥವಾ 7795003043 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಶಾಲಾ ಮುಖ್ಯಶಿಕ್ಷಕರು ಚಂದ್ರಶೇಖರ್ ಪಾರೆಪ್ಪಾಡಿ ತಿಳಿಸಿದ್ದಾರೆ.
Opportunity to become an English teacher: Recruitment at a Sullia school – ತುಳು ಟೈಮ್ಸ್
ಇದನ್ನೂ ಓದಿ : ಸುಳ್ಯದಲ್ಲಿ ಸೆ.14ರಿಂದ ಶ್ರೀ ಗಣೇಶೋತ್ಸವ: ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ
====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/5C4rFNGDf_w











