ಬ್ರೇಕಿಂಗ್ ನ್ಯೂಸ್
ಸುಳ್ಯ

ಸುಳ್ಯ : ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಸುಳ್ಯ: Tulu Times l ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆ.31ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕೆವಿಜಿ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನ ಪ್ರಾಂಶುಪಾಲ ಡಾ. ಪ್ರಮೋದ್ ಕೆ.ಜೆ. ಹಾಗೂ ಎನ್‌ಎಂಸಿ ಮತ್ತು ಎನ್‌ಎಂಪಿಯುಸಿ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್ ನಾಯಕ್ ಮಾತನಾಡಿ, ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ ಎಂದರು.

ನಿಯಮಿತ ಕ್ರೀಡಾ ಚಟುವಟಿಕೆಗಳು ದೈಹಿಕ ಕ್ಷಮತೆಯನ್ನು ಹೆಚ್ಚಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ, ತಂಡ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಅವರು ತಿಳಿಸಿದರು.
ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೆವಿಜಿ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಯ ಕ್ರೀಡಾ ಕಾರ್ಯದರ್ಶಿ ಡಾ. ವೈಷ್ಣವ್ ಅವರು ತಮ್ಮ ಕ್ರೀಡಾ ಸಾಧನೆಗೆ ಪೂರಕವಾದ ಅಂಶಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಕೆವಿಜಿ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಯ ಪ್ರಾಂಶುಪಾಲ ಡಾ. ಮನೀಶ್ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಕಾಲೇಜಿನ ಸಾಂಸ್ಕೃತಿಕ ಸಂಯೋಜಕ ಕಾರ್ತಿಕ್ ಕುಡೆಕಲ್ ಕಾರ್ಯಕ್ರಮವನ್ನು ಆಯೋಜಿಸಿ ನಿರ್ವಹಿಸಿದರು.

Khelega Bharat, Jeetega Bharat ಎಂಬ ಆಶಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಕ್ರೀಡೆ, ದೈಹಿಕ ಕ್ಷಮತೆ, ಆರೋಗ್ಯ ಮತ್ತು ಸಕ್ರಿಯ ಜೀವನಶೈಲಿಯ ಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಆರೋಗ್ಯಕರ ಜೀವನಶೈಲಿಯತ್ತ ಹೆಜ್ಜೆ ಇಡಬೇಕು ಎಂಬ ಸಂದೇಶವನ್ನು ಕಾರ್ಯಕ್ರಮ ಸಾರಿತು.

National Sports Day Celebration at KVG Medical College – ತುಳುಟೈಮ್ಸ್

ಇದನ್ನೂ ಓದಿ :ಸುಳ್ಯ : ಟೀಚರ್ಸ್‌ಗೆ ಜ್ಯುವೆಲ್ಲರಿ ಶಾಪಿಂಗ್‌ನಲ್ಲಿ ಭರ್ಜರಿ ಆಫರ್

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/aaO7S8GGYgs

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 14

You cannot copy content of this page