ಬ್ರೇಕಿಂಗ್ ನ್ಯೂಸ್
ಸುಳ್ಯ

ಸುಳ್ಯ : ಸಿಎ ಬ್ಯಾಂಕ್‌ನಿಂದ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಕಾಳುಮೆಣಸು, ಕಾಫಿ ಗಿಡ ವಿತರಣೆ

ಸುಳ್ಯ: Tulu Times l ಕೃಷಿಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಸಿಎ ಬ್ಯಾಂಕ್), ಸುಳ್ಯದ ನೇತೃತ್ವದಲ್ಲಿ ಸಂಘದ ಸದಸ್ಯ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಕಾಳುಮೆಣಸು ಹಾಗೂ ಕಾಫಿ ಗಿಡಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ ನೀಡಿದರು.

ಸಂಘದ ವತಿಯಿಂದ ಸದಸ್ಯ ಕೃಷಿಕರಿಗೆ 50 ಸಾವಿರ ಕಾಳುಮೆಣಸಿನ ಗಿಡಗಳು ಹಾಗೂ 30 ಸಾವಿರ ಕಾಫಿ ಗಿಡಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕೃಷಿ ಕ್ಷೇತ್ರದಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಿರುವ ರೈತರಿಗೆ ಈ ಯೋಜನೆ ನೆರವಾಗಲಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ, ಅಡಿಕೆ ಹಳದಿ ರೋಗ, ಕಾಡುಪ್ರಾಣಿಗಳ ಹಾವಳಿ ಸೇರಿದಂತೆ ಹಲವು ಸಮಸ್ಯೆಗಳಿಂದ ಕೃಷಿಕರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸಿಎ ಬ್ಯಾಂಕ್ ವತಿಯಿಂದ ಕಾಳುಮೆಣಸು ಹಾಗೂ ಕಾಫಿ ಗಿಡಗಳನ್ನು ರಿಯಾಯಿತಿ ದರದಲ್ಲಿ ವಿತರಿಸುತ್ತಿರುವುದು ಶ್ಲಾಘನೀಯ ಎಂದರು. ಕೃಷಿಕರಿಗೆ ಅಗತ್ಯ ಸಹಕಾರ ನೀಡುವ ಮೂಲಕ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿರುವ ಸಹಕಾರ ಸಂಘದ ಕಾರ್ಯ ಮಾದರಿಯಾಗಿದೆ ಎಂದು ಅವರು ಹೇಳಿದರು.

ಸಿಎ ಬ್ಯಾಂಕ್ ಅಧ್ಯಕ್ಷ ವಿಕ್ರಂ ಅಡ್ಡಂಗಾಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಡಿಕೆ ತೋಟಗಳಲ್ಲಿ ಎಲೆ ಹಳದಿ ರೋಗದ ಸಮಸ್ಯೆಯಿಂದ ಅನೇಕ ಕೃಷಿಕರು ತತ್ತರಿಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಂಘದ ಸದಸ್ಯರಾಗಿರುವ ಕೃಷಿಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 50 ಸಾವಿರ ಕಾಳುಮೆಣಸು ಮತ್ತು 30 ಸಾವಿರ ಕಾಫಿ ಗಿಡಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಕಾಳುಮೆಣಸು ಹಾಗೂ ಕಾಫಿ ಬೆಳೆಗಳು ಕೃಷಿಕರಿಗೆ ಪರ್ಯಾಯ ಆದಾಯದ ಮೂಲವಾಗುವುದರ ಜೊತೆಗೆ ತೋಟಗಾರಿಕಾ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ಸಹಕಾರಿಯಾಗಲಿವೆ ಎಂಬ ಆಶಯವನ್ನು ವ್ಯಕ್ತಪಡಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಎನ್.ಎ. ರಾಮಚಂದ್ರ, ಬಾಲಗೋಪಾಲ ಸೇರ್ಕಜೆ, ಪ್ರಭೋದ್ ಶೆಟ್ಟಿ ಮೇನಾಲ, ಕೇಶವ ಮಾಸ್ತರ್ ಹೊಸಗದ್ದೆ, ಶಿವರಾಮ ಕೇರ್ಪಳ, ನವ್ಯಾ ಚಂದ್ರಶೇಖರ, ಹರೀಣಾಕ್ಷಿ ಬೇಲ್ಯ, ಚಂದ್ರಶೇಖರ ದೊಡ್ಡರಿ, ಮಾಜಿ ಅಧ್ಯಕ್ಷ ಸುಭೋದ್ ಶೆಟ್ಟಿ ಮೇನಾಲ, ಹರೀಶ್ ಕಂಜಿಪಿಲಿ, ರಂಜಿತ್ ಎನ್.ಆರ್., ರಾಜೇಶ್ ಶೆಟ್ಟಿ ಮೇನಾಲ, ಕಮಲಾಕ್ಷ ರೈ ಮೇನಾಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Sullia: CA Bank distributes black pepper and coffee saplings to farmers at concessional rates – ತುಳುಟೈಮ್ಸ್

ಇದನ್ನೂ ಓದಿ :ಸುಳ್ಯ : ಸೆ.5ರಂದು ಪ್ರಜಾಸೇವೆ ಅಭಿಯಾನ ಸಭೆ

===

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್  ಮಾಡಿ :https://youtu.be/EAlZlYPZOZI

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 14

You cannot copy content of this page