ಮೈಸೂರು: Tulu Times l ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಸ್ಯಾಂಡಲ್‌ವುಡ್ ತಾರೆಯರಿಗೂ ಆಹ್ವಾನ ನೀಡಲಾಗಿದೆ. ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ ಕನ್ನಡ ಚಿತ್ರರಂಗದ ದಿಗ್ಗಜರನ್ನು ಸ್ಮರಿಸುವ ವಿಶೇಷ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ನಡೆಯುತ್ತಿದೆ. ಜಂಬೂಸವಾರಿ ವೇಳೆ ಕನ್ನಡ ಚಿತ್ರರಂಗದ ಮೇರು ನಟರಾದ ಡಾ. ರಾಜ್‌ಕುಮಾರ್, ಡಾ. ವಿಷ್ಣುವರ್ಧನ್, ಅಂಬರೀಶ್ ಹಾಗೂ ಪುನೀತ್ ರಾಜ್‌ಕುಮಾರ್ ಅವರನ್ನು ಸ್ಮರಿಸುವ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ. ಕನ್ನಡ ಚಿತ್ರರಂಗಕ್ಕೆ ಈ ನಾಲ್ವರು ನೀಡಿದ ಕೊಡುಗೆಯನ್ನು ಸ್ಮರಿಸುವ ಮೂಲಕ ದಸರಾ ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಲು ಸಿದ್ಧತೆ ಕೈಗೊಳ್ಳಲಾಗಿದೆ.
ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸ್ಯಾಂಡಲ್‌ವುಡ್‌ನ ಸುಮಾರು 30 ಪ್ರಮುಖ ತಾರೆಯರಿಗೆ ಆಹ್ವಾನ ನೀಡಲಾಗಿದೆ. ನಟರಾದ ಯಶ್, ಶಿವರಾಜ್‌ಕುಮಾರ್, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ್ ಹಾಗೂ ರವಿಚಂದ್ರನ್ ಅವರಿಗೆ ಆಹ್ವಾನ ನೀಡಲಾಗಿದೆ. ಅದೇ ರೀತಿ ನಟಿಯರಾದ ಉಮಾಶ್ರೀ, ರಚಿತಾ ರಾಮ್, ಸಪ್ತಮಿ ಗೌಡ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಮೈಸೂರು ದಸರಾ ಜಂಬೂಸವಾರಿಯು ಈಗಾಗಲೇ ದೇಶ-ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ಸ್ಯಾಂಡಲ್‌ವುಡ್ ತಾರೆಯರ ಉಪಸ್ಥಿತಿ ಈ ಬಾರಿಯ ಮಹೋತ್ಸವಕ್ಕೆ ಮತ್ತಷ್ಟು ವಿಶೇಷತೆ ತರಲಿದೆ ಎಂದು ನಿರೀಕ್ಷಿಸಲಾಗಿದೆ.
Sandalwood stars at the Jumbo Savari; who has been invited? – ತುಳು ಟೈಮ್ಸ್
ಇದನ್ನೂ ಓದಿ : ರೇಷನ್ ಕಾರ್ಡ್ ಇ-ಕೆವೈಸಿ: ಸೆ.30 ಲಾಸ್ಟ್ ಡೇಟ್
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/5C4rFNGDf_w











