Uppinangady: ಒಂದೇ ಮನೆಯ ಮೂರು ಮಕ್ಕಳಿಗೆ ವಿಷದ ಹಾವು ಕಚ್ಚಿ ಪ್ರಾಣಾಪಾಯದ ಭೀತಿ ಉಂಟುಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಸಮೀಪದ ಕುದ್ರಡ್ಕ ಎಂಬಲ್ಲಿ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುದ್ರಡ್ಕ ನಿವಾಸಿ ವಿಜಯ ಮಡೆಕ್ಕಿಲ ಎಂಬವರ ಮನೆಯಲ್ಲಿ ಅವರ ಮಗ ದಕ್ಷಿತ್, ಅವರ ಅಕ್ಕನ ಮಕ್ಕಳಾದ ವಿಶ್ಮಿತಾ, ಮತ್ತು ಅನ್ವಿತಾ ಎಂಬವರು ಒಂದೇ ಕೋಣೆಯಲ್ಲಿ ಮಲಗಿದ್ದರು. ಈ ವೇಳೆ ಕೋಣೆಯೊಳಗೆ ಪ್ರವೇಶಿಸಿದ್ದ ವಿಷಪೂರಿತ ಕನ್ನಡಿ ಹಾವು ದಕ್ಷಿತ್, ವಿಶ್ಮಿತಾ ಹಾಗೂ ಅನ್ವಿತಾ ರವರ ಕೈಗೆ ಕಚ್ಚಿದೆ. ಕೂಡಲೇ ಗಾಬರಿಗೊಂಡ ಮನೆಯವರು ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದ್ದಾರೆ.
ಉಪ್ಪಿನಂಗಡಿಯನ್ನು ಸಂಪರ್ಕಿಸುವ ಗುರುವಾಯನ ಕೆರೆ-ಉಪ್ಪಿನಂಗಡಿ ರಸ್ತೆಯ ದುಸ್ಥಿತಿಯಿಂದಾಗಿ ಆಸ್ಪತ್ರೆ ತಲುಪುವುದು ವಿಳಂಬವಾಗಿ ವಿಷ ದೇಹ ಸೇರಿ ಅಪಾಯ ಉಂಟಾಗುವ ಸಾಧ್ಯತೆ ಅರಿತ ಮನೆಯವರು ನಾಡಿ ವೈದ್ಯರ ಮೊರೆ ಹೋಗಿದ್ದಾರೆ.
ತಣ್ಣೀರುಪಂತ ಗ್ರಾಮದಲ್ಲಿನ ನಾಟಿ ವೈದ್ಯ ಸೂರಪ್ಪ ಪೂಜಾರಿ ರವರ ಮನೆ ಬಾಗಿಲು ತಟ್ಟಿದ್ದಾರೆ. ಮಧ್ಯರಾತ್ರಿಯೇ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ನಾಟಿವೈದ್ಯ ಸೂರಪ್ಪ ಪೂಜಾರಿ (77) ರವರು ತಾವು ಪರಂಪರಾಗತವಾಗಿ ಹೊಂದಿದ್ದ ಔಷಧಿಯನ್ನು ಮಕ್ಕಳಿಗೆ ನೀಡಿ ಅಪಾಯದಿಂದ ಪಾರು ಮಾಡಿದ್ದಾರೆ.
ಇದನ್ನೂ ಓದಿ: BBK12: ನೀನು ನಿನ್ನ ಪಾಡಿಗೆ ಇದ್ಬಿಡು..ಪ್ಲೀಸ್..ಸೂರಜ್ ಗೆ ರಾಶಿಕಾ ಡೈರೆಕ್ಟ್ ಹೇಳಿದ್ಯಾಕೆ..?
========================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











