ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕಸುಳ್ಯ

Somwarpet Crime: ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಕಳ್ಳ ಮಾಡಿದ್ದೇನು ಗೊತ್ತಾ..?

Somwarpet Crime: ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದ ಗಾಂಧಿ ನಗರದ ನಿವಾಸಿ ಸಂಜಯ್ ಆಲಿಯಾಸ್ ಸ್ಯಾಂಡಿ ಎಂಬ ವ್ಯಕ್ತಿ ವಾರೆಂಟ್ ಜಾರಿಯಾದ ಹಿನ್ನೆಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಬಿಜೆಪಿ ಮಾಡುತ್ತಿದೆ- ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ನೇರ ಆರೋಪ!

30ಕ್ಕೂ ಹೆಚ್ಚು ಪ್ರಕರಣದ ಆರೋಪಿ ಸಾಯಲು ಯತ್ನ..!

ಜಾಮೀನು ರಹಿತ ವಾರೆಂಟ್ ಜಾರಿ ಮಾಡಲು ಆರೋಪಿಯ ಮನೆಗೆ ತೆರಳಿದ್ದ ವೇಳೆ ಆರೋಪಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಸೋಮವಾರಪೇಟೆ ಪಟ್ಟಣದ ಗಾಂಧಿ ನಗರದ ನಿವಾಸಿ ಸಂಜಯ್ ಆಲಿಯಾಸ್ ಸ್ಯಾಂಡಿ ಎಂಬ ವ್ಯಕ್ತಿಯ ವಿರುದ್ಧ ಮನೆ ಕಳ್ಳತನ, ಬೈಕ್ ಕಳ್ಳತನ, ದರೋಡೆ, ವಂಚನೆ ಸೇರಿದಂತೆ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಆದರೆ ಆರೋಪಿ ಯಾವುದೇ ವಿಚಾರಣೆಗೆ ಹಾಜರಾಗದ ಹಿನ್ನಲೆ ನ್ಯಾಯಾಲಯ ಆತನ ಮೇಲೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.

ಇದನ್ನೂ ಓದಿ: ಜಟ್ಟಿಪಳ್ಳ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ನಿಧನ

ಬೆಂಕಿ ನಂದಿಸಿ ಆರೋಪಿ ಸಂಜಯ್ ನನ್ನು ರಕ್ಷಿಸಿದ ಪೊಲೀಸರು..!

ವಾರೆಂಟ್ ಜಾರಿ ಮಾಡಲು ಪೊಲೀಸ್ ಸಿಬ್ಬಂದಿಗಳಾದ ಮಲ್ಲೇಶ್ ಹಾಗೂ ಸಾಜನ್ ಪತ್ತರ್ ಆರೋಪಿಯ ಮನೆಗೆ ತೆರಳಿದ್ದಾರೆ. ಈ ವೇಳೆ ಆರೋಪಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ತಕ್ಷಣವೇ ಪೊಲೀಸ್ ಸಿಬ್ಬಂದಿಗಳು ಬೆಂಕಿ ನಂದಿಸಿ ಆರೋಪಿ ಸಂಜಯ್ನನ್ನು ರಕ್ಷಿಸಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿಗಳಾದ ಮಲ್ಲೇಶ್ ಅವರ ಎರಡು ಮುಂಗೈ ಹಾಗೂ ಸಾಜನ್ ಅವರ ಒಂದು ಕೈಗೆ ಸುಟ್ಟ ಗಾಯಗಳಾಗಿವೆ. ಸದ್ಯ ಎದೆ ಹಾಗೂ ಭುಜದ ಭಾಗಗಳಲ್ಲಿ ಗಂಭೀರವಾದ ಸುಟ್ಟ ಗಾಯಗಳಾಗಿರುವ ಆರೋಪಿ ಸಂಜಯ್ನನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಗಾಯಗೊಂಡ ಪೊಲೀಸ್ ಸಿಬ್ಬಂದಿಗಳೂ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರಪೇಟೆ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸೂಸೈಡ್‌ ಗೆ ಯತ್ನಿಸುತ್ತಿದ್ದ ತಂದೆ ಮಗಳ ರಕ್ಷಿಸಿದ ಪಣಂಬೂರು ಪೊಲೀಸರು!

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 170

You cannot copy content of this page