Bengaluru: ಅರಣ್ಯ ಇಲಾಖೆಯ ನೇಮಕಾತಿಗಳಿಗೆ ಬಿಎಸ್ಸಿ ಅರಣ್ಯಶಾಸ್ತ್ರ ಪದವಿಯನ್ನು ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವಂತೆ ಒತ್ತಾಯಿಸಿ ಕಳೆದ 20 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅರಣ್ಯ ಇಲಾಖೆಯ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ಕಡೆಗೂ ಅಂತ್ಯಗೊಂಡಿದೆ.
ಇದನ್ನೂ ಓದಿ : ಸಿಎಂಗೆ ರೈತರ ಬಗ್ಗೆ ಅಸಡ್ಡೆ ಭಾವನೆ ಇದೆ: ಬಸವರಾಜ ಬೊಮ್ಮಾಯಿ ಆಗ್ರಹ !
ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ನಡೆಯುತ್ತಿತ್ತು..!
ಕೊಡಗು ಜಿಲ್ಲೆಯ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳು ದಿಢೀರ್ ಅಂತ ಕರ್ನಾಟಕ ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳ ಮತ್ತು ಪದವೀಧರರ ಸಂಘದ ನೇತೃತ್ವದಲ್ಲಿ ಹೋರಾಟವನ್ನು ಬೆಂಗಳೂರಿಗೆ ಸ್ಥಳಾಂತರಿಸಿದ್ದರು. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನ್ಯಾಯಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿದ್ದರು. ಹೋರಾಟದ ಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ. ಎಸ್ ಪೊನ್ನಣ್ಣ ಭೇಟಿ ನೀಡಿ ಮನವಿ ಸ್ವೀಕರಿಸಿ ಬೇಡಿಕೆಗಳನ್ನುಆಲಿಸಿದರು.
ಇದನ್ನೂ ಓದಿ : ಸೇವಾ ಗುತ್ತಿಗೆ ಆಧಾರದಲ್ಲಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸ್ಥಳಕ್ಕೆ ಆಗಮಿಸಿ ಸ್ಪಂದಿಸಿದ ಸಚಿವರು..!
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಸಂರಕ್ಷಣಾಧಿಕಾರಿ ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯಶಾಸ್ತ್ರ ಶಾಸ್ತ್ರ ಪದವಿಯನ್ನು ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವ ಕುರಿತು ಪ್ರತಿಭಟನಾನಿರತ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ಸಚಿವರು ಹಾಗೂ ಶಾಸಕರು ಮನವಿ ಸ್ವೀಕರಿಸಿ ಭರವಸೆಗಳನ್ನು ನೀಡಿದ ಹಿನ್ನಲೆ ವಿದ್ಯಾರ್ಥಿಗಳು ಹೋರಾಟವನ್ನು ಕೈಬಿಟ್ಟರು. ಆ ಮೂಲಕ ಕಳೆದ 20 ದಿನಗಳಿಂದ ನಡೆಯುತ್ತಿದ್ದ ಅರಣ್ಯ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ವಿಭಿನ್ನ ಹೋರಾಟ ಅಂತ್ಯ ಕಂಡಿದೆ.
ಕಳೆದ ತಿಂಗಳುಗಳ ಹಿಂದೆ, ಪೊನ್ನಂಪೇಟೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯ ಅಧಿಕಾರಿ ಹುದ್ದೆಗೆ ಅರಣ್ಯಶಾಸ್ತ್ರ ಪದವೀಧರರನ್ನೇ ನೇರ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳ ಧರಣಿ ಆರು ದಿನ ಮುಂದುವರಿದಿತ್ತು. ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರ ಸಂಘದ ಅಧ್ಯಕ್ಷ ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರ ಸಂಘದ ಅಧ್ಯಕ್ಷ ಅಕ್ಷಯ್ ಕುಮಾರ್ ನೇತೃತ್ವದಲ್ಲಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಎದುರು ತರಗತಿ ಬಹಿಷ್ಕರಿಸಿ, ಅನಿರ್ದಿಅನಿರ್ದಿಷ್ಟಾವಧಿ ಧರಣಿ ನಡೆಸಿದ್ದರು.
ಇದನ್ನೂ ಓದಿ: ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಕಳ್ಳ ಮಾಡಿದ್ದೇನು ಗೊತ್ತಾ..?
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











