Belthangady: ಅಕ್ರಮವಾಗಿ ಗೋಸಾಗಾಟದ ಸಂದರ್ಭ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಆರೋಪಿಗೆ ಸೇರಿದ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿ ಗೋಹಂತಕರಿಗೆ ಬಿಸಿ ಮುಟ್ಟಿಸಿದ್ದಾರೆ.
ನ. 2ರ ಭಾನುವಾರದಂದು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ನಡೆಸಿದ ಕಾರ್ಯಚರಣೆಯಲ್ಲಿ ಗೋಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದರು.
ಗೋಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್ ಯಾನೆ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.
ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಮೂರು ದನಗಳನ್ನು ಆರೋಪಿ, ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ತಂಚಿಬೆಟ್ಟು ನಿವಾಸಿ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯಲ್ಲಿ ಗೋಮಾಂಸ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ. ಈ ಹಿನ್ನಲೆ ಧರ್ಮಸ್ಥಳ ಪೊಲೀಸರು ಉಳ್ಳಾಲದಲ್ಲಿರುವ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯನ್ನು ನ. 4 ರಂದು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.
ದನ ನೀಡಿದ್ದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಝಹರಾ ಸೇರಿ ಮೂರು ಮಂದಿಯ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 5-12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ 11,(1)(D) ಪ್ರಾಣಿ ಹಿಂಸೆ ಕಾಯಿದೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: Movie : ನವೆಂಬರ್ 7 ಕ್ಕೆ ಮರುಬಿಡುಗಡೆಯಾಗಲಿದೆ ‘ಯಜಮಾನ’ : ಹೊಸ ತಂತ್ರಜ್ಞಾನದೊಂದಿಗೆ ಸಾಹಸ ಸಿಂಹ ವಿಷ್ಣುವರ್ಧನ್
==================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/wUcWTshTMXo?si=qTp6Zeeu3MaZsdur











