ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

Bengaluru: ಸಾರಿಗೆ ಸಚಿವರನ್ನು ಭೇಟಿ ಮಾಡಿ ಕೂರ್ಗ್ ಅಭಿವೃದ್ಧಿ ಬಗ್ಗೆ ಮನವಿ ಸಲ್ಲಿಸಿದ ಎ.ಎಸ್ ಪೊನ್ನಣ್ಣ

Bengaluru: ವಿರಾಜಪೇಟೆ ಕ್ಷೇತ್ರದ ಸಾರಿಗೆ ಸಮಸ್ಯೆಗಳು ಹಾಗೂ ಕೊಡಗು ಜಿಲ್ಲಾ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಸಮಸ್ಯೆಗಳ ಕುರಿತು ಎ.ಎಸ್ ಪೊನ್ನಣ್ಣ  ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಅಧಿಕಾರದ ಮದದಿಂದ ರಾಜ್ಯ ಸರ್ಕಾರ ಕೆಟ್ಟದಾಗಿ ನಡೆದುಕೊಳ್ಳುತ್ತಿದೆ..!

ವಿರಾಜಪೇಟೆಯಲ್ಲಿ ಡಿಪೋ ಆರಂಭಿಸಲು ಮನವಿ..!

ಕೊಡಗಿನಲ್ಲಿ ಚಲಿಸುವ ಎಲ್ಲಾ ಆಟೋರಿಕ್ಷಾ ಗಳಿಗೆ ಜಿಲ್ಲಾ ಪರವಾನಿಗೆ ಅನುಮತಿ ನೀಡಬೇಕು. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಹಾಗೂ ಪೊನ್ನಂಪೇಟೆ ವಾಹನ ತಪಾಸಣೆ ಕ್ಯಾಂಪ್ ತೆರೆಯಲು ಹಾಗೂ ವಿರಾಜಪೇಟೆಯಲ್ಲಿ ಡಿಪೋ ಆರಂಭಿಸಲು ಮನವಿ ಸಲ್ಲಿಸಿದರು. ಈ ಬಗ್ಗೆ ಸಚಿವರು ಕೂಡಲೇ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಆಟೋ ಮಾಲೀಕರ ಮತ್ತು ಚಾಲಕರ ಸಂಘ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ರೈತ ಮಂಜೇಗೌಡ ಸಾವಿಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ..!

ಸಚಿವ ಕೃಷ್ಣ ಬೈರೇಗೌಡರನ್ನು  ಭೇಟಿಯಾದ ಎ.ಎಸ್ ಪೊನ್ನಣ್ಣ & ಟೀಂ!

ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ, ಸಿ & ಡಿ ಸಮಸ್ಯೆ-ಕಂದಾಯ ಸಚಿವರನ್ನು ಭೇಟಿಯಾಗಿದ್ದಾರೆ.  ಈ ವೇಳೆ ಸಚಿವ ಕೃಷ್ಣ ಬೈರೇಗೌಡ, ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ ಮಾಡೋದಾಇ ಹೇಳಿದ್ದಾರೆ.
ಇದನ್ನೂ ಓದಿ: ಡಿ. 27 ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ ; ಆನ್ ಲೈನ್ ಬುಕ್ಕಿಂಗ್ ಆರಂಭ

ಸಿ ಅಂಡ್ ಡಿ ಜಾಗದ ಸಮಸ್ಯೆ ಬಗ್ಗೆ ರೈತರು ನಡೆಸುತ್ತಿರುವ ಹೋರಾಟದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರನ್ನು ಭೇಟಿಯಾಗಿ ಸಿ ಅಂಡ್ ಡಿ. ವಿಚಾರವಾಗಿ ಹಾಗೂ ಇದರಿಂದಾಗಿ ಜಿಲ್ಲೆಯ ರೈತರಿಗೆ ಆಗುತ್ತಿರುವ ತೊಂದರೆ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ ಅವರು ಈ ಬಗ್ಗೆ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ಸಮಿತಿಯೊಂದರನ್ನು ರಚಿಸಲಾಗುವುದೆಂದು ಭರವಸೆ ನೀಡಿದರು.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 157

You cannot copy content of this page