ಬ್ರೇಕಿಂಗ್ ನ್ಯೂಸ್
ಕರ್ನಾಟಕ

Government Place : ಸರ್ಕಾರಿ ಸ್ಥಳಗಳ ಕಾರ್ಯಕ್ರಮಕ್ಕೆ ಅನುಮತಿ ಖಡ್ಡಾಯ : ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್

High Court : ಸರ್ಕಾರಿ ಸ್ಥಳಗಳಲ್ಲಿ ಉದಾಹರಣೆಗೆ ಶಾಲಾ, ಕಾಲೇಜು ಮೈದಾನ, ಪಟ್ಟಣ ಪಂಚಾಯಿತಿ, ಸಾರ್ವಜನಿಕ ಸಭಾಂಗಣ ಇತ್ಯಾದಿಗಳಲ್ಲು ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿ ಖಡ್ಡಾಯವೆಂದು ಹಾಗೂ ಅಕ್ಟೋಬರ್ 28ರಂದು ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಪರ ವಕೀಲರು ಈ ಮೂಲಕ ಅರ್ಜಿ ಸಲ್ಲಿಸಿದ್ದರು.

ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ;

ಅನುಮತಿ ಇಲ್ಲದೆ ಕಾರ್ಯಕ್ರಮ ಮಾಡಿದರೆ ಪೋಲಿಸ್ ಕ್ರಮ ಅಥವಾ ದಂಡ ಹಾಗಯು ಕಾರ್ಯಕ್ರಮವನ್ನೇ ರದ್ದು ಮಾಡುವ ಆದೇಶವನ್ನೂ ಹೊರಡಿಸಲಾಗಿತ್ತು. ಜೊತೆಗೆ ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದರೆ ಕಾನೂನಾತ್ಮಕ ಕ್ರಮವನ್ನು ಕೈಗೊಳ್ಳಬೇಕಾಗಬಹುದು ಎಂದು ಕಾನೂನಿನ ಅಡಿಯಲ್ಲಿ ತಿಳಿಸಲಾಗಿತ್ತು. ಇದೇ ವಿಚಾರವಾಗಿ, ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಷಯದಲ್ಲಿ ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಹೈಕೋರ್ಟ್ ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ;

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ತೆರವು ಕೋರಿದ್ದ ಅರ್ಜಿಯ ಕುರಿತಂತೆ ಧಾರವಾಡ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದ್ದು, ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ಹಾಗಾಗಿ, ಇದಕ್ಕೆ ತಡೆ ನೀಡಲು ವಿಭಾಗೀಯ ಪೀಠ ನಿರಾಕರಿಸಿದೆ.
ನವೆಂಬರ್ 4ರಂದು ನಡೆದಿದ್ದ ಅರ್ಜಿಯ ವಿಚಾರಣೆ ವಾದ ಪ್ರತಿವಾದ ಆಲಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಲಾಗಿತ್ತು.. ಗುರುವಾರ (ನ.6) ಹೈಕೋರ್ಟ್ ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ವಿಭಾಗೀಯ ಪೀಠ ನಕಾರ ವ್ಯಕ್ತಪಡಿಸಿದೆ. ತಡೆ ತೆರವಿಗೆ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ, ರಾಜ್ಯ ಸರ್ಕಾರದ ಮೇಲ್ಮನವಿಯನ್ನು ವಜಾಗೊಳಿಸಿತು.

ಇದನ್ನೂ ಓದಿ :Vishweshwar Hegde Kageri: ವಂದೇ ಮಾತರಂ ಗೀತೆ ಹೊಗಳುವ ಭರದಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ರಾ ಕಾಗೇರಿ..?

…………

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/rHNt-vvvD9o?si=ouBPhn5iTQwNIPSm

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page