ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರು

Puttur: ಸುಳ್ಳುದಾಖಲೆ ಸೃಷ್ಟಿಸಿ ಆರೋಪಿಗಳನ್ನು ರಕ್ಷಿಸುವ ಯತ್ನ – ದೂರು ದಾಖಲು

Puttur: ಗೋಪೂಜೆಯಂದು ನಡೆದಿದ್ದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಮಹತ್ತರ ಬೆಳವಣಿಗೆಯಾಗಿದೆ. ಆರೋಪಿಗಳನ್ನು ಬಚಾವ್‌ ಮಾಡಲು ಸುಳ್ಳು ದಾಖಲೆ ಸೃಷ್ಟಿಸಿ ವೈರಲ್‌ ಮಾಡಿದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೋಪೂಜೆಯಂದು ಜಾನುವಾರಗಳನ್ನು ಐಚರ್‌ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಬಂದ ಹಿನ್ನಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಗೋಹಂತಕರನ್ನು ಹಡೆಮುರಿಕಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದ ಹಿನ್ನಲೆ ಪ್ರಕರಣ ದಾಖಲಾಗಿದೆ.

ಐಚರ್‌ ವಾಹನದಲ್ಲಿ ಸಾಗಿಸುತ್ತಿದ್ದ ಜಾನುವಾರುಗಳನ್ನು ಖರೀದಿ ಮಾಡಿರುವ ರಶೀದಿಗಳೆಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಡಲಾಗಿತ್ತು. ಆ ಮೂಲಕ ಅಕ್ರಮ ಗೋಸಾಗಾಟ ಮಾಡುವವರನ್ನು ನಿರಪರಾಧಿಗಳು ಎಂದು ಬಿಂಬಿಸುವ ಪ್ರಯತ್ನ ನಡೆದಿತ್ತು.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ದಾಖಲೆಗಳ ಬಗ್ಗೆ ವಿಚಾರಿಸಿದಾಗ ಚನ್ನರಾಯಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಈ ಬಗ್ಗೆ ದೃಢಪಡಿಸಿದ್ದಾರೆ. ಶುಕ್ರವಾರದಂದು ಮಾತ್ರ ಜಾನುವಾರು ಸಂತೆ ನಡೆಯುತ್ತೆ. ಆದ್ರೆ ಈಗ ವೈರಲ್‌ ಆದ ದಾಖಲೆಗಳು ಅಂದರೆ ರಶೀದಿ ಕ್ರ.ಸಂ: 27653 ಹಾಗೂ 27654ನ್ನು ತಿದ್ದಿ ಸುಳ್ಳು ಸೃಷ್ಟಿಸಿ ಹರಿದಾಡಿಸಿರುವುದು ಕಂಡು ಬಂದಿದೆ. ಅಲ್ಲದೆ ಈ ವಿಷಯಕ್ಕೆ ಸಂಬಂಧಿಸಿ ಆರ್‌ಟಿಒ ಮತ್ತು ಪಶು ವೈದ್ಯಾಧಿಕಾರಿಯಿಂದ ಪಡೆದ ಮಾಹಿತಿಯಂತೆ ವಾಹನದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡಲು ಅನುಮತಿ ನೀಡಿಲ್ಲವೆಂದು ತಿಳಿಸಲಾಗಿದೆ.

ಹಾಗಾಗಿ ನಕಲಿ ದಾಖಲೆ ಸೃಷ್ಟಿಸಿ ಆರೋಪಿಗಳನ್ನು ರಕ್ಷಿಸುವ ಉದ್ದೇಶದಿಂದ State office SDPI Karnataka ಎಂಬ ಹೆಸರಿನ ಎಕ್ಸ್‌ ಖಾತೆ, Thejasnews.comನ ಮಾಲಕ/ಸಂಪಾದಕ ಮತ್ತು ಸಾದತ್ ಬಜತ್ತೂರು ಮತ್ತಿತರರು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ್ದಾರೆ. ಆ ಮೂಲಕ ಸಾರ್ವಜನಿಕರು ಗುಂಪುಗೂಡಿ ದೊಂಬಿಯಂತಹ ಅಪರಾಧ ನಡೆಸಲು ಸನ್ನಿವೇಶ ಸೃಷ್ಟಿಸಿರುತ್ತಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ: 123-2025, ಕಲಂ: 233, 240, 338, 353(1) (b), 192, 61(2)(b),238(c),r/w3(5) ಭಾರತೀಯ ನ್ಯಾಯ ಸಂಹಿತೆ 2023ರಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ ಎಂದು ಜಿಲ್ಲಾ ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಗೂ ಪ್ರಚೋದನಾಕಾರಿ ಪೋಸ್ಟ್ ಪ್ರಸಾರ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಹಾಗಾಗಿ ಸಾಮಾಜಿಕ ಜಾಲತಾಣದ ಬಳಕೆದಾರರು ಎಚ್ಚರಿಕೆ ವಹಿಸುವಂತೆ ಎಸ್ಪಿ ಸೂಚಿಸಿದ್ದಾರೆ.

ಇದನ್ನೂ ಓದಿ: IPPB : ಕೇವಲ 299 ರೂ. ಪಾವತಿಗೆ 10 ಲಕ್ಷ ರೂ. ವಿಮೆ

===================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/rHNt-vvvD9o?si=ouBPhn5iTQwNIPSm

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 36

You cannot copy content of this page