Puttur: ಜೊತೆಗೆ ಓದುತ್ತಿದ್ದ ವಿದ್ಯಾರ್ಥಿ ಅನಾರೋಗ್ಯ ಪೀಡಿತನಾದ ಹಿನ್ನಲೆ ಆತನನ್ನು ನೋಡಲೆಂದು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗಳ ಗುಂಪಿನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಇಬ್ಬರು ದುಷ್ಕರ್ಮಿಗಳು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ಈ ಘಟನೆ ನಡೆದಿದೆ.
ಸಹಪಾಠಿಗಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕೋಮು ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿ ಕಾಲೇಜು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾಗಿ ದೂರು ದಾಖಲಾಗಿದೆ. ಬೈಕ್ ಸವಾರ ಮುಸ್ತಫಾ ಮತ್ತು ಮುಸ್ತಫಾ ಪೆರಿಯಡ್ಕ ಬಂಧಿತರು.
ತಮ್ಮದೇ ಕಾಲೇಜಿನಲ್ಲಿ ಓದುತ್ತಿರುವ ಸಹಪಾಠಿ ವಿದ್ಯಾರ್ಥಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದ. ಆತನ ಆರೋಗ್ಯ ವಿಚಾರಿಸುವ ಸಲುವಾಗಿ, ಕಾಲೇಜಿನ ಕೆಲವು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಆತನ ಮನೆಗೆ ಬರುತ್ತಿದ್ದರು. ಪೆರಿಯಡ್ಕ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಮುಸ್ತಫಾ ಮತ್ತು ಮುಸ್ತಫಾ ಪೆರಿಯಡ್ಕ ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ಮೋಟಾರ್ ಸೈಕಲ್‌ನಲ್ಲಿ ಬಂದು ವಿದ್ಯಾರ್ಥಿಗಳನ್ನು ತಡೆದಿದ್ದಾರೆ.
“ದುಷ್ಕರ್ಮಿಗಳು ವಿದ್ಯಾರ್ಥಿಗಳ ಹೆಸರುಗಳು, ಕಾಲೇಜು ಮತ್ತು ಊರಿನ ಬಗ್ಗೆ ವಿಚಾರಿಸಿ, ವಿಭಿನ್ನ ಕೋಮುಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದು, ಕೋಮುದ್ವೇಷದಿಂದ ಅವಾಚ್ಯವಾಗಿ ಬೈದು, ಓರ್ವ ವಿದ್ಯಾರ್ಥಿಗೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಬಿಎನ್‌ಎಸ್ 2023 ರ ಸೆಕ್ಷನ್ 126(2), 352, 351(2), 115(2), 353(2) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲಾಗಿದ್ದು ತನಿಖೆ ಮುಂದುವರೆದಿದೆ.
ಇದನ್ನೂ ಓದಿ: Sullia : ಪ್ರಪ್ರಥಮಬಾರಿಗೆ ಸುಳ್ಯದಲ್ಲಿ ರಾಜ್ಯಮಟ್ಟದ ವೇಯ್ಟ್ ಲಿಫ್ಟಿಂಗ್
===================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/2NUxdpIvL2A?si=fWmoMsoNw25i7mH_











