Manipal: ಅಪ್ರಾಪ್ತೆಯ ಜೊತೆ ಯುವಕನೋರ್ವ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಕಟಪಾಡಿ ಮಣಿಪುರದ ನಿವಾಸಿಯಾಗಿರುವ ಶ್ರೀಶಾಂತ್ ಪೂಜಾರಿ (20) ಅಪ್ರಾಪ್ತೆಯನ್ನು ಮದುವೆ ಆಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ.
ಈ ವಿಷಯ ತಿಳಿದ ಬಾಲಕಿಯ ಪೋಷಕರು ನೇರವಾಗಿ ಲಾಡ್ಜ್‌ಗೆ ಪೊಲೀಸರೊಂದಿಗೆ ಬಂದಿದ್ದಾರೆ. ಅಪ್ರಾಪ್ತೆಯ ನಕಲಿ ಆಧಾರ್ ಕಾರ್ಡ್ ನೀಡಿ ಕರೆದುಕೊಂಡು ಹೋಗಿದ್ದು, ಆತನ ವಿರುದ್ಧ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದ ಇನ್ನೋರ್ವ ಬಾಲಕಿ ಆತನ ವಿರುದ್ಧ ದೂರು ಕೊಟ್ಟಿದ್ದಾಳೆ. ಶ್ರೀಶಾಂತ್ ನನ್ನನ್ನೂ ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್‌ಗೆ ಕರೆದುಕೊಂಡು ಹೋಗಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶ್ರೀಕಾಂತ್ ಕಟಪಾಡಿಯ ಬಿಜೆಪಿ ಮುಖಂಡನ ಪುತ್ರ ಎಂದು ತಿಳಿದುಬಂದಿದ್ದು, ಈತ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ.
ಇದನ್ನೂ ಓದಿ: kadaba: ಒಂಭತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
==================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/2NUxdpIvL2A?si=fWmoMsoNw25i7mH_











