Bengaluru: ‘ವಂದೇ ಮಾತರಂ’ ಗೀತೆಯ 150ನೇ ವಾರ್ಷಿಕೋತ್ಸವದ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬೆಳಿಗ್ಗೆ ಸಾಮೂಹಿಕ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: ಫೆ.26ಕ್ಕೆ ರಶ್ಮಿಕಾ-ವಿಜಯ್ ಮದುವೆ..?
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಸಂಸದ ಪಿ.ಸಿ. ಮೋಹನ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಬಸವರಾಜ ಮತ್ತಿಮಡು, ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ, ಕೇಶವ ಪ್ರಸಾದ್, ರಾಜ್ಯ ಉಪಾಧ್ಯಕ್ಷೆ ಮತ್ತು ವಂದೇ ಮಾತರಂ 150ನೇ ವಾರ್ಷಿಕೋತ್ಸವದ ರಾಜ್ಯ ಸಂಚಾಲಕಿ ಶ್ರೀಮತಿ ಮಾಳವಿಕ ಅವಿನಾಶ್, ರಾಜ್ಯ ಕಾರ್ಯದರ್ಶಿಗಳಾದ ವಿನಯ್ ಬಿದರೆ, ಶ್ರೀಮತಿ ಅಂಬಿಕಾ ಹುಲಿನಾಯ್ಕರ್, ಶರಣು ತಳ್ಳಿಕೇರಿ, ಹೆಚ್.ಸಿ. ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ವಂದೇ ಮಾತರಂನ 150 ನೇ ವಾರ್ಷಿಕೋತ್ಸವದ ಅಂಗವಾಗಿ ನವದೆಹಲಿಯಲ್ಲಿ ವರ್ಷಪೂರ್ತಿ ನಡೆಯುವ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದು, ಇದಕ್ಕೂ ಮೊದಲು ಬಿ.ವೈ. ವಿಜಯೇಂದ್ರ ಹಾಗೂ ಇತರ ಪ್ರಮುಖರು ಅದನ್ನು ಟಿ.ವಿ. ಮೂಲಕ ವೀಕ್ಷಿಸಿದರು.
ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ನೇ ವಾರ್ಷಿಕೋತ್ಸವದ ಅಂಗವಾಗಿ ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ವರ್ಷಪೂರ್ತಿ ನಡೆಯುವ ಸ್ಮರಣಾರ್ಥ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ವಂದೇ ಮಾತರಂ ವೆಬ್‌ಸೈಟ್ ಅನ್ನು ಸಹ ಬಿಡುಗಡೆ ಮಾಡಲಾಯಿತು. ವಂದೇ ಮಾತರಂ, ಈ ಪದಗಳು ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪ. ವಂದೇ ಮಾತರಂ, ಈ ಪದಗಳು ನಮ್ಮನ್ನು ಇತಿಹಾಸಕ್ಕೆ ಕರೆದೊಯ್ಯುತ್ತವೆ ಎಂದು ಹೇಳಿದರು.
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











