Kumble: ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗೋಡೆಗೆ ಬಡಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ನಡೆದಿದೆ. ಕುಂಬಳೆಯ ಕೊಡ್ಯಮ್ಮೆ ಪೂಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದೆ. ಬಂಬ್ರಾಣ ಚೂರಿತ್ತಡ್ಕ ನಿವಾಸಿ ರಝಾಕ್ -ರಂಸೀನಾ ದಂಪತಿಯ ಪುತ್ರಿ ರಿಸ್ವಾನ (15) ಮೃತಪಟ್ಟ ದುರ್ದೈವಿ.
ಕೊಡ್ಯೆಮ್ಮೆ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿರುವ ರಿಸ್ವಾನ ತನ್ನ ಗೆಳತಿಯೊಂದಿಗೆ ಸ್ಕೂಟರಿನಲ್ಲಿ ಟ್ಯೂಷನ್ ಗೆ ತೆರಳುತ್ತಿದ್ದರು. ಈ ವೇಳೆ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಗೋಡೆಗೆ ಡಿಕ್ಕಿಯಾಗಿದೆ.
ಅಪಘಾತದ ಬೆನ್ನಲ್ಲೇ ಇಬ್ಬರನ್ನೂ ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ಸೇರಿಸಲಾಯಿತು. ಗಂಭೀರ ಗಾಯಗೊಂಡ ರಿಸ್ವಾನಾಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿಲ್ಲ. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಅಪ್ರಾಪ್ತರಿಗೆ ವಾಹನ ನೀಡಬೇಡಿ, ಸಂಚಾರಿ ನಿಯಮಗಳನ್ನು ಪಾಲಿಸಿ ಎಂದು ಪೊಲೀಸ್ ಇಲಾಖೆ ನಿರಂತರವಾಗಿ ಹೇಳಿಕೊಂಡು ಬರುತ್ತಿದೆ. ಆದರೆ ನಿಯಮ ಉಲ್ಲಂಘನೆ ನಡೆಯುತ್ತಲೇ ಇದೆ.
ಇದನ್ನೂ ಓದಿ: Southadka Temple: ಸೌತಡ್ಕ ದೇವಸ್ಥಾನಕ್ಕೆ ಬಂದು ಭಕ್ತರು ಗಂಟೆ ಕಟ್ಟೋದು ಯಾಕೆ ಗೊತ್ತಾ..?
==================
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











