ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರು

Puttur: ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯಕ್ಕೆ ವಂಚಿಸಿದಾತ ಅರೆಸ್ಟ್

Puttur: ನ್ಯಾಯಾಲಯಕ್ಕೆ ನಕಲಿ ದಾಖಲೆಯನ್ನು ಕೊಟ್ಟು ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಪಡುವನ್ನೂರು ನಿವಾಸಿ ಅಬ್ದುಲ್ ಹಾಶೀಮ್ (34) ಬಂಧಿತ ಆರೋಪಿ.

ಆರೋಪಿಯೊಬ್ಬರಿಗೆ ಜಾಮೀನು ವಿಚಾರಕ್ಕೆ ಸಂಬಂಧಿಸಿ ನಕಲಿ ಪಹಣಿಪತ್ರ ನೀಡಿ ನ್ಯಾಯಾಲಯಕ್ಕೆ ವಂಚಿಸಲಾಗಿದೆ. ಅಬ್ದುಲ್‌ ಹಾಶೀಮ್‌ ಪುತ್ತೂರು ನಿವಾಸಿಯೊಬ್ಬರ ಮಾಲಕತ್ವದಲ್ಲಿರುವ ಜಮೀನಿನ ಪಹಣಿಪತ್ರವನ್ನು ತನ್ನ ಹೆಸರಿನಲ್ಲಿರುವ ಜಮೀನಿನ RTCಯೆಂದು ನಂಬಿಸಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ್ದಾನೆ. ಆ ಮೂಲಕ ನ್ಯಾಯಾಲಕ್ಕೆಯೇ ನಕಲಿ ದಾಖಲೆ ತೋರಿಸಿ ಪಂಗನಾಮ ಹಾಕಿದ್ದಾನೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 84/2025 ಕಲಂ 417, 419, 467, 468, 471  ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು, ನಕಲಿ ದಾಖಲೆ ಸೃಷ್ಟಿಸಿ ಪಿರ್ಯಾದುದಾರರೆಂದು ಹೇಳಿಕೊಂಡು, ನಕಲಿ ಸಹಿ ಮಾಡಿ ನ್ಯಾಯಾಲಯಕ್ಕೆ ವಂಚಿಸುವ ಉದ್ದೇಶದಿಂದ, ಬೆಲೆಬಾಳುವ ಭದ್ರತಾ ಪತ್ರವನ್ನು ನೀಡಿದ ಆರೋಪದಲ್ಲಿ ಅಬ್ದುಲ್ ಹಾಶೀಮ್ ನನ್ನು ಬಂಧಿಸಲಾಗಿದೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಇದನ್ನೂ ಓದಿ: Yakshagana ಪ್ರಸಂಗಕರ್ತ, ಛಂದೋಬ್ರಹ್ಮ ಗಣೇಶ್‌ ಕೊಲೆಕಾಡಿ ಇನ್ನಿಲ್ಲ

====================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/AYP_nK8o1Rw?si=6gOb6xoMtg9GLTeu

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 34

You cannot copy content of this page