Sullia : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿಯು ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನ ಗುರುತಿಸಿ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ವರ್ಷ ಅಂದ್ರೆ 2023 – 24ನೇ ಸಾಲಿನ ಅರೆಭಾಷೆ ಪ್ರಶಸ್ತಿಗೆ ಭಾಜನರಾಗಿರುವವರ ಹೆಸರನ್ನು ಇದೀಗ ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗಿದೆ.
ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಯು. ಪಿ ಶಿವಾನಂದ, ರಾಷ್ಟ್ರ ಪ್ರಶಸ್ತಿ ವಿಜೇತರು, ಶಿಕ್ಷಕರು, ನಿವೃತ್ತ ಪ್ರಾಂಶುಪಾಲರಾದ ಕೆ.ಆರ್ ಗಂಗಾಧರ್, ಅರೆಭಾಷೆ ಸಂಘಟಕ ಹಾಗೂ ಕೆ.ಎಸ್.ಎಫ್. ಸಿ ಅಧಿಕಾರಿ ದಂಬೆಕೋಡಿ ಸುಬ್ರಾಯ ಆನಂದರು ಈ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ನವೆಂಬರ್ 8ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಪ್ರಶಸ್ತಿ ಘೋಷಣೆಯನ್ನು ಮಾಡಲಾಗಿರುತ್ತದೆ.
ಈ ಪ್ರಶಸ್ತಿ ಪ್ರಧಾನವು, ನವೆಂಬರ್ 30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೀಡಲಾಗುತ್ತದೆ ಎಂದು ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ.
ಅಕಾಡೆಮಿಯಿಂದ ನೀಡಲಾಗುವ ಗೌರ ಪ್ರಶಸ್ತಿಯು 50,000 ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ ಎಂದು ವರದಿಯಾಗಿದೆ. ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು, ಐನ್ ಮನೆ ಕುರಿತ ಅರೆಭಾಷೆ ಸಾಕ್ಷ ಚಿತ್ರ ಪ್ರದರ್ಶನ ಹಾಗೂ ಅರೆಭಾಷೆ ಸಾಂಸ್ಕೃತಿಕ ಮನೋರಂಜನ ಕಾರ್ಯಕ್ರಮ ಹಾಗೂ ಅರೆಭಾಷೆ ನಾಟಕ ‘ಅಪ್ಪ’ ಪ್ರದರ್ಶನಗೊಳ್ಳಲಿದೆ ಎಂದು ಸದಾನಂದ ಮಾವಜಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿರುತ್ತಾರೆ.
ಈ ಸಂದರ್ಭ ಅಕಾಡೆಮಿ ನಿರ್ದೇಶಕರಾದ ಡಾ.ಎನ್. ಎ ಜ್ಞಾನೇಶ್, ತೇಜುಕುಮಾರ್ ಬಡ್ಡಡ್ಕ, ಚಂದ್ರಶೇಖರ ಪೆರಾಲು, ಲೋಕೇಶ್ ಊರುಬೈಲ್ ಹಾಗೂ ಚಂದ್ರಾವತಿ ಬಡ್ಡಡ್ಕ ಉಪಸ್ಥಿತರಿದ್ದರು.
ಇದನ್ನೂ ಓದಿ :Rukmini Vasanth: ಪೊಲೀಸ್ ಠಾಣೆ ಮೆಟ್ಟಿಲೇರುತ್ತಾರಾ ನಟಿ ರುಕ್ಮಿಣಿ ವಸಂತ್? ಏನಿದು ಕಥೆ?
……………
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/Qg7ctTd7pfY?si=eN-uBG4rXhPOtTUK











