Bengaluru: ಗುಂಡಿ ಬಿದ್ದ ರಸ್ತೆಗಳನ್ನು ಗುರುತಿಸಿ ಸರ್ಕಾರದ ಗಮನ ಸೆಳೆಯಲು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ತೆಲುಗಿನ ಗುಮ್ಮಡಿ ನರಸಯ್ಯ ಪಾತ್ರದಲ್ಲಿ ಶಿವಣ್ಣನ ಆಯ್ಕೆಯೇ ಯಾಕೆ..?
ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಶಾಸಕರಾದ ಎಸ್. ಸುರೇಶ್ ಕುಮಾರ್, ಎನ್. ಮುನಿರತ್ನ, ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್, ಮುಖಂಡ ಉಮೇಶ್ ಶೆಟ್ಟಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಪಕ್ಷದ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದನ್ನೂ ಓದಿ: ಪೊಲೀಸ್ ಠಾಣೆ ಮೆಟ್ಟಿಲೇರುತ್ತಾರಾ ನಟಿ ರುಕ್ಮಿಣಿ ವಸಂತ್? ಏನಿದು ಕಥೆ?
ರಾಜ್ಯ ಸರ್ಕಾರವು ಕೂಡಲೇ ಕಾರ್ಯಪ್ರವೃತ್ತವಾಗಿ ರಸ್ತೆಗುಂಡಿಗಳನ್ನು ಮುಚ್ಚಬೇಕು, ಅಪಘಾತಕ್ಕೆ ಕಾರಣವಾಗುವ ಹಾಗೂ ಜನರ ಜೀವ ಹಾನಿಗೆ ಎಡೆಕೊಡುವ ರಸ್ತೆ ಗುಂಡಿಗಳ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡನೀಯ ಎಂದು ಮುಖಂಡರು ಟೀಕಿಸಿದರು.
ಬಿಜೆಪಿ ರಾಜ್ಯ ಕಚೇರಿಯಲ್ಲಿ ಕನಕದಾಸರ ಜಯಂತಿ!
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕನಕದಾಸರ ಜಯಂತಿಯನ್ನು ಆಯೋಜಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಶಾಸಕ ಭೈರತಿ ಬಸವರಾಜ್, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಧಾನಪರಿಷತ್ ಮಾಜಿ ಸದಸ್ಯ ಮಹಂತೇಶ ಕವಟಗಿಮಠ, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಸೋಮಶೇಖರ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಪಕ್ಷದ ಪ್ರಮುಖರು ಮತ್ತು ಕಚೇರಿ ಸಿಬ್ಬಂದಿಗಳು ಭಾಗವಹಿಸಿದ್ದರು. ಕನಕದಾಸರ ಜೀವನಾದರ್ಶಗಳನ್ನು ಅಳವಡಿಸಿಕೊಳ್ಳುವ ಕುರಿತು ಗಣ್ಯರು ಮಾತನಾಡಿದರು. ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











