ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

Randeep Surjewala: ಮತಗಳ್ಳತನ ವಿರುದ್ಧದ ಹೋರಾಟದಲ್ಲಿ ಕರ್ನಾಟಕಕ್ಕೆ ರಾಷ್ಟ್ರದಲ್ಲೇ ಪ್ರಥಮ ಸ್ಥಾನ!

Randeep Surjewala: ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶಾದ್ಯಂತ ನಡೆದ ಮತಗಳ್ಳತನದ ವಿರುದ್ಧದ ಸಹಿ ಸಂಗ್ರಹ ಅಭಿಯಾನದಲ್ಲಿ ಅತಿ ಹೆಚ್ಚು ಸಹಿ ಸಂಗ್ರಹಿಸಿ ಕರ್ನಾಟಕವು ಇಡೀ ರಾಷ್ಟ್ರದಲ್ಲೇ ಪ್ರಥಮ ಸ್ಥಾನ ಗಳಿಸಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ  ಹೇಳಿದ್ದಾರೆ.

ಈ ಐತಿಹಾಸಿಕ ಯಶಸ್ಸಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅಭಿನಂದನೆ ಸಲ್ಲಿಸಿದ್ದಾರೆ.

​ರಾಜ್ಯದ ಮಹಾದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ ಅಕ್ರಮ ನಡೆದಿತ್ತು. ಹರಿಯಾಣದಲ್ಲಿ 25 ಲಕ್ಷ ಮತ ಅಕ್ರಮವಾಗಿದೆ. ಈ ಎಲ್ಲ ವಿಚಾರಗಳ ಕುರಿತು ರಾಹುಲ್ ಗಾಂಧಿಯವರು ಸಹಿ ಸಂಗ್ರಹ ಅಭಿಯಾನ ಮಾಡಲು ಕೆಪಿಸಿಸಿಯ ಎಲ್ಲ ಸಮಿತಿಗಳಿಗೆ ಕರೆ ಕೊಟ್ಟಿದ್ದರು. ಸನ್ಮಾನ್ಯ ರಾಹುಲ್ ಗಾಂಧಿಯವರು ಹಾಗೂ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಿ ಈ ಕುರಿತು ಜಾಗೃತಿ ಮೂಡಿಸಿದ್ದರು.

ರಾಹುಲ್ ಗಾಂಧಿ ಅವರ ಕರೆಗೆ ಓಗೊಟ್ಟು ಕರ್ನಾಟಕ ಕಾಂಗ್ರೆಸ್ ಸಮಿತಿಯ ವಿವಿಧ ವಿಭಾಗಗಳು ಅತಿ ಹೆಚ್ಚು ಸಹಿ ಸಂಗ್ರಹಿಸಿ, ಅಭಿಯಾನವನ್ನು ಯಶಸ್ವಿಗೊಳಿಸಿವೆ. ಅನ್ಯಾಯದ ವಿಚಾರಗಳು ಬಂದಾಗ ಧ್ವನಿ ಎತ್ತಲು ಕರ್ನಾಟಕ ಸದಾ ಮೊದಲಿರುತ್ತದೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆ ಎಂದು ಸುರ್ಜೇವಾಲಾ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಕರ್ನಾಟಕ ರಾಜ್ಯದಿಂದ ದಾಖಲೆಯ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿದೆ. ಈ ಐತಿಹಾಸಿಕ ಯಶಸ್ಸಿಗಾಗಿ ಅಭಿನಂದನೆ ಸುರ್ಜೆವಾಲಾ ಸಲ್ಲಿಸಿ ದ್ದಾರೆ. ​ಸಂಗ್ರಹಿಸಿದ ಸಹಿ ಅರ್ಜಿಗಳನ್ನು ಇದೇ ನವೆಂಬರ್ 10ರಂದು ದೆಹಲಿಗೆ ರವಾನಿಸಲಾಗುವುದು. ಅಲ್ಲದೆ, ನವೆಂಬರ್ 25ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸುರ್ಜೇವಾಲಾ ತಿಳಿಸಿದರು.

​ಚುನಾವಣಾ ಆಯೋಗವು ಮತ ಅಕ್ರಮಗಳಲ್ಲಿ ಭಾಗಿಯಾಗಿದೆ ಎಂದು ಗಂಭೀರವಾಗಿ ಆರೋಪಿಸಿದ ಅವರು, ಆಯೋಗದ ನಿಷ್ಕ್ರಿಯತೆ ನೋಡಿದಾಗ, ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಮತ್ತು ಇತರ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಮತಪತ್ರ (ಬ್ಯಾಲೆಟ್ ಪೇಪರ್) ಮೂಲಕ ನಡೆಸಲು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 125

You cannot copy content of this page