ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರು

Puttur: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ – ಓರ್ವನ ಬಂಧನ

Puttur: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಪತ್ತೆ ಮಾಡಿದ ಪೊಲೀಸರು ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಆಟೋ ರಿಕ್ಷಾ ಚಾಲಕ, ಸವಣೂರಿನ ಪ್ರಸಾದ್ ಬಂಧಿತ ಆರೋಪಿ.

ನ.8ರಂದು ಮಧ್ಯಾಹ್ನ, ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಪರಿಶೀಲಿಸಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಜನಾರ್ದನ ಕೆ.ಎಂ.ರವರು ಸಿಬ್ಬಂದಿಗಳೊಂದಿಗೆ ತೆರಳಿ ಸದ್ರಿ ಆಟೋ ರಿಕ್ಷಾವನ್ನು ತಡೆದು ಪರಿಶೀಲಿಸಿದಾಗ, ಸುಮಾರು 1 ಕೆಜಿಗಿಂತಲೂ ಅಧಿಕ ಗಾಂಜಾ ಹಾಗೂ 25 ಇಂಚು ಉದ್ದದ ತಲವಾರು ಪತ್ತೆಯಾಗಿದೆ.

ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಕಲಂ 8(2), 20 (ii) (c) NDPS & 025(1B), b) Indian Arms Act (106/2025) ಪ್ರಕರಣ ದಾಖಲಾಗಿದೆ. ಆರೋಪಿ ರಿಕ್ಷಾ ಚಾಲಕ ಪ್ರಸಾದ್‌ನನ್ನು ಪೊಲೀಸರು ಬಂಧಿಸಿ, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನಿಮ್ಮೂರಿನ ಸುದ್ದಿಗಳಿಗಾಗಿ ಸಂಪರ್ಕಿಸಿ: 7349258678 

ಇದನ್ನೂ ಓದಿ: Mahanati : ‘ಮಹಾನಟಿ ಸೀಸನ್ – 2’ ಚಿನ್ನದ ಕಿರೀಟ ಮುಡಿಗೇರಿಸಿಕೊಂಡ ಮಂಗಳೂರಿನ ವಂಶಿ ರತ್ನಕುಮಾರ್

===============

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:‌ https://www.youtube.com/@tulutimess

https://www.youtube.com/watch?v=zBY4CXdK86U
ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 36

You cannot copy content of this page