ಬ್ರೇಕಿಂಗ್ ನ್ಯೂಸ್
ಕಡಬಕರಾವಳಿ

Kadaba: ಕೋಮುದ್ವೇಷ ಪ್ರಚೋದಿಸುವ ಪೋಸ್ಟ್‌ – ಯುವಕನ ಬಂಧನ

Kadaba: ಕೋಮು ದ್ವೇಷ ಪ್ರಚೋದಿಸುವ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕಸಬಾ ಬೆಂಗ್ರೆಯ ಮಹಮ್ಮದ್ ಮುನಾವರ್ ಬಂಧಿತ ಯುವಕ.

ಇನ್ಸ್ಟಾಗ್ರಾಮ್‌ನ target_boy900 ಎಂಬ ಖಾತೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಶದ ಹಿನ್ನೆಲೆಯಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ, ಪ್ರತೀಕಾರಕ್ಕೆ ಪ್ರಚೋದಿಸುವಂತಹ ಸಂದೇಶವನ್ನು ಮುನಾವರ್‌ ಪೋಸ್ಟ್‌ ಮಾಡಿದ್ದ. ಈ ಬಗ್ಗೆ ಜೂನ್‌ ತಿಂಗಳಿನಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಅಕ್ರ: 40/2025 ಕಲಂ: 55,353(2) r/w 103 BNS-2023 ರಂತೆ ಪ್ರಕರಣ ದಾಖಲಾಗಿತ್ತು.

ನ.8 ರಂದು ಮಹಮ್ಮದ್ ಮುನಾವರ್‌ನನ್ನು ಕಡಬ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆರೋಪಿಯನ್ನು ನ.9 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ನಿಮ್ಮೂರಿನ ಸುದ್ದಿಗಳಿಗಾಗಿ ಸಂಪರ್ಕಿಸಿ: 7349258678 

ಇದನ್ನೂ ಓದಿ:  Puttur: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ – ಓರ್ವನ ಬಂಧನ

===================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:‌ https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 33

You cannot copy content of this page