Bengaluru: ಕರ್ನಾಟಕದಲ್ಲಿ ಕ್ರಿಮಿನಲ್ಗಳು, ಭಯೋತ್ಪಾದಕರಿಗೆ ರಾಜಾಶ್ರಯ ದೊರಕುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ: ಮರಗಳನ್ನು ಕಡಿದು ಹೂವಿನ ಮಾರ್ಕೆಟ್ ಮಾಡೋದು ಎಷ್ಟೊಂದು ಸರಿ ?
ಇವರಿಗೆ ನಾಚಿಕೆ ಆಗಬೇಕಲ್ಲವೇ..? ಸಿ ಟಿ ರವಿ ಗರಂ!
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರೆಸಾರ್ಟ್ಗೆ ಹೋಗಬೇಕಾದ ಅವಶ್ಯಕತೆ ಇಲ್ಲ; ಜೈಲಿಗೆ ಹೋದರೆ ಸಾಕು. ನಿಮಗೆ ಗಾಂಜಾ, ಡ್ರಿಂಕ್ಸ್ (ದಾರೂ) ಸಿಗುತ್ತದೆ. ಬ್ಲೂಫಿಲಂ ನೋಡಬೇಕಾದರೆ ಅದೂ ಸಿಗುತ್ತದೆ. ಮೊಬೈಲ್ನಲ್ಲಿ ಮಾತನಾಡಲೂ ವ್ಯವಸ್ಥೆ ಇದೆ. ಇವರಿಗೆ ನಾಚಿಕೆ ಆಗಬೇಕಲ್ಲವೇ ಎಂದು ಆಕ್ಷೇಪಿಸಿದರು.
ಇದನ್ನೂ ಓದಿ: ಐಪಿಎಲ್ ಮಿನಿ ಹರಾಜು ಪ್ರಕ್ರಿಯೆಗೆ ದಿನಾಂಕ ನಿಗದಿ..!
ಭಯೋತ್ಪಾದಕನ ಕೈಗೆ ಮೊಬೈಲ್ ಸಿಗುವುದಾದರೆ ದೇಶದ್ರೋಹದ ಚಟುವಟಿಕೆಗೆ ರಾಜಾಶ್ರಯ ನೀಡಿದಂತೆ ಅಲ್ಲವೇ ಎಂದು ಕೇಳಿದರು. ಉಮೇಶ್ ರೆಡ್ಡಿ ಎಂಬ ಅತ್ಯಾಚಾರಿ ಜೈಲಿನಲ್ಲಿ ಮೋಜು ಮಸ್ತಿ ಮಾಡಬಹುದಾದರೆ, ಜೈಲಿನಲ್ಲಿ ಕ್ರಿಮಿನಲ್ಗಳಿಗೆ ರಾಜಾಶ್ರಯ ಇದೆ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕೇ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ..!
ಇದನ್ನೂ ಓದಿ: ವಿಶ್ವಕಪ್ ಟಿ 20 – 2026ಕ್ಕೆ ನಿಗದಿಯಾಯ್ತು ದಿನ : ಕ್ರಿಕೆಟ್ ಅಭಿಮಾನಿಗಳಿಗಿದು ಸಿಹಿ ಸುದ್ದಿ
ಗೃಹ ಸಚಿವರಿಗೆ ಅಧಿಕಾರದಲ್ಲಿ ಇರುವ ನೈತಿಕತೆ ಇಲ್ಲ..!
ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ಮಾದಕವಸ್ತು ಉತ್ಪಾದನಾ ಕಾರ್ಖಾನೆ ಆರಂಭವಾಗುತ್ತದೆ. ಕರ್ನಾಟಕದವರಿಗೆ ಮಾಹಿತಿಯೇ ಇಲ್ಲ; ಮಹಾರಾಷ್ಟ್ರ ಪೊಲೀಸರು ಬಂದು ಹಿಡಿಯುತ್ತಾರೆ. ಇದಕ್ಕೆ ರಾಜಾಶ್ರಯವೇ ಕಾರಣ ಎಂದು ದೂರಿದರು.
ರಾಜ್ಯದ ಜೈಲಿನ ಇಂಥ ಚಟುವಟಿಕೆಗಳ ಕುರಿತು ಎನ್ಐಎ, ಇಲ್ಲಿನ ಬೇಹುಗಾರಿಕಾ ದಳಕ್ಕೆ 4 ತಿಂಗಳ ಹಿಂದೆ ಎಚ್ಚರಿಕೆ ಕೊಟ್ಟಿತ್ತು. ಆದರೂ, ನಿರ್ಲಕ್ಷ್ಯ ವಹಿಸಿದ್ದಾರೆಂದರೆ ಅದು ನಿರ್ಲಕ್ಷ್ಯವಲ್ಲ; ಕೃಪೆ ಎಂದು ಟೀಕಿಸಿದರು. ಆ ಕೃಪೆಗೆ ಸಿಎಂ, ಗೃಹ ಸಚಿವರು ಹೊಣೆ ಹೊತ್ತುಕೊಳ್ಳಬೇಕು. ಆದ್ದರಿಂದ ಮುಖ್ಯಮಂತ್ರಿ, ಗೃಹ ಸಚಿವರಿಗೆ ಅಧಿಕಾರದಲ್ಲಿ ಇರುವ ನೈತಿಕತೆ ಇಲ್ಲ. ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಸಿ ಟಿ ರವಿ ಈ ಹಿಂದೆಯೂ ಸರ್ಕಾರದ ಬಗ್ಗೆ ಕಿಡಿಕಾರಿದ್ದರು.
ಇದನ್ನೂ ಓದಿ: ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ..!
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











