Agriculture : ನಮ್ಮ ದೇಶದಲ್ಲಿ ನೈಸರ್ಗಿಕ ಕೃಷಿಯನ್ನು ಉತ್ತೇಜಿಸುವುದು ಹಾಗೂ ರೈತರು ನೈಸರ್ಗಿಕ ಕೃಷಿಯನ್ನು ಅಳವಡಿಸಿಕೊಳ್ಳುವುದನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಎಂಬ ವಿನೂತನ ಯೋಜನೆಯನ್ನು ಆರಂಭಿಸಿದೆ. ಇದು 15ನೇ ಹಣಕಾಸು ಆಯೋಗದ ಅವಧಿಯಾದ 2025-26ರ ವರೆಗೆ ಜಾರಿಯಲ್ಲಿರುವ ಒಂದು ಸ್ವತಂತ್ರ ಕೇಂದ್ರ ಪ್ರಾಯೋಜಿತ ಯೋಜನೆಯಾಗಿದೆ. ದುಬಾರಿಯಾದ ಹಾಗೂ ಅಂಗಡಿಗಳಲ್ಲಿ ಖರೀದಿಸಿದ ಗೊಬ್ಬರಗಳು ಮತ್ತು ಕೀಟನಾಶಕಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವ ಮೂಲಕ ಈ ಯೋಜನೆ ರೈತರಿಗೆ ಅವರ ಕೃಷಿ ವೆಚ್ಚವನ್ನು ಇಳಿಸಲು ಸಹಾಯ ಮಾಡುತ್ತದೆ.
ಕೇಂದ್ರ ಪ್ರಾಯೋಜಿತ ಯೋಜನೆಯಾದ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಅನ್ನು, ಸಾಂಪ್ರದಾಯಿಕ ಜ್ಞಾನದಲ್ಲಿ ಬೇರೂರಿರುವ ರಾಸಾಯನಿಕ-ಮುಕ್ತ ಕೃಷಿಯನ್ನು ಉತ್ತೇಜಿಸಲು ಪ್ರಾರಂಭಿಸಲಾಗಿದೆ. ಈ ಯೋಜನೆಯು ರೈತರಿಗೆ ತರಬೇತಿ ನೀಡುವ ಮೂಲಕ, ಆರ್ಥಿಕ ಪ್ರೋತ್ಸಾಹಕಗಳನ್ನು ಒದಗಿಸುವ ಮೂಲಕ ಮತ್ತು ಜೈವಿಕ ಸಂಪನ್ಮೂಲ ಕೇಂದ್ರಗಳಂತಹ ಮೂಲಸೌಕರ್ಯಗಳನ್ನು ಸ್ಥಾಪಿಸುವ ಮೂಲಕ ಮಣ್ಣಿನ ಆರೋಗ್ಯವನ್ನು ಸುಧಾರಿಸುವ, ರೈತರ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡುವ ಮತ್ತು ಹವಾಮಾನ ಸ್ಥಿತಿಸ್ಥಾಪಕ ಪರಿಸರ ವ್ಯವಸ್ಥೆಗಳನ್ನು ರಚಿಸುವ ಗುರಿಯನ್ನು ಹೊಂದಿದೆ. ಈ ಕಾರಣ, ಕೇಂದ್ರ ಸಚಿವ ಸಂಪುಟವು ನವೆಂಬರ್ 25, 2024 ರಂದು ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್‌ಗೆ ಅನುಮೋದನೆ ನೀಡಿತ್ತು.
ಯೋಜನೆಯ ಪ್ರಯೋಜನಗಳನ್ನು ಪಡೆಯಲು ರೈತರು ಆಫ್‌ಲೈನ್ ಅಥವಾ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಗೆ ನಿಮ್ಮ ಆಸಕ್ತಿಯನ್ನು ವ್ಯಕ್ತಪಡಿಸಲು ನಿಮ್ಮ ಸ್ಥಳೀಯ ಜಿಲ್ಲಾ ಪಂಚಾಯತಿಯ ಅಧಿಕಾರಿಯನ್ನು ಸಂಪರ್ಕಿಸಿ. ಆನ್ಲೈನ್ ಅರ್ಜಿ ಹಾಕುವವರು, ರಾಷ್ಟ್ರೀಯ ನೈಸರ್ಗಿಕ ಕೃಷಿ ವೆಬ್‌ಸೈಟ್‌ನ ನೋಂದಣಿ ಪುಟ naturalfarming.dac.gov.in ಗೆ ಭೇಟಿ ನೀಡಿ, ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಇದನ್ನೂ ಓದಿ :Viral News: ಬಿಕಿನಿ ತೊಟ್ಟು ಗಂಗಾಸ್ನಾನ ಮಾಡಿದ ಮಹಿಳೆ..!
………..
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/9fR6e9tLRSs?si=oeFOEtg8uLTHFOOH











