Belthangady: ನೂತನವಾಗಿ ಆರಂಭಗೊಂಡ ಬೆಳ್ತಂಗಡಿ ಉಪವಿಭಾಗಕ್ಕೆ DYSP ಯಾಗಿ ರೋಹಿಣಿ ಸಿ.ಕೆ. ಅಧಿಕಾರ ಸ್ವೀಕರಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಉಪವಿಭಾಗ ತೆರೆಯಲಾಗಿದೆ.
ಬೆಂಗಳೂರು ವೈಟ್ ಫೀಲ್ಡ್ ಸೆನ್ DYSPಯಾಗಿದ್ದ ರೋಹಿಣಿ ಸಿ.ಕೆ. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ರೋಹಿಣಿ ಅವರು ಸೋಮವಾರ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.
ವೃತ್ತ ನಿರೀಕ್ಷಕ ಸುಬ್ಬಾಪುರ ಮರ್, ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ, ವೇಣೂರು, ಧರ್ಮಸ್ಥಳ, ಕಡಬ, ಪುಂಜಾಲಕಟ್ಟೆ, ಉಪ್ಪಿನಂಗಡಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ಗಳು ಅವರನ್ನು ಸ್ವಾಗತಿಸಿದರು.
ಇದನ್ನೂ ಓದಿ: Gossip: ಡಿವೋರ್ಸ್ ರೂಮರ್ಸ್ಗೆ ಫುಲ್ ಸ್ಟಾಪ್ ಇಟ್ಟ ಮುರುಗ ಇಶಿತಾ ಜೋಡಿ..!
===============
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











