ಬ್ರೇಕಿಂಗ್ ನ್ಯೂಸ್
ಕರ್ನಾಟಕ

KSRTC : ಪ್ರಯಾಣಿಕರನ್ನು ಆಕರ್ಷಿಸುತ್ತಿದೆ ಫ್ಲೈ ಬಸ್…!

KSRTC : ಫ್ಲೈಬಸ್ ಇದೀಗ ನೂತನವಾಗಿ ಸಾರಿಗೆ ಸಂಸ್ಥೆಯಿಂದ ಹೊರಬಂದಿರುವ ಸಾರಿಗೆ ವ್ಯವಸ್ಥೆಯಾಗಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನಡೆಸುವ ಒಂದು ವಿಶೇಷ ಏರ್‌ಪೋರ್ಟ್ ಬಸ್ ಸೇವೆ. ಇದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಜ್ಯದಲ್ಲಿನ ವಿವಿಧ ನಗರಗಳ ನಡುವೆ ಪ್ರಯಾಣಿಕರಿಗೆ ನೇರ ಸಂಪರ್ಕ ಒದಗಿಸುತ್ತದೆ. ಫ್ಲೈಬಸ್ ಸಂಪರ್ಕಿಸುವ ಪ್ರಮುಖ ನಗರಗಳಲ್ಲಿ‌ ಮೈಸೂರು, ಮಂಗಳೂರು, ಹುಬ್ಬಳ್ಳಿ, ಮಡಿಕೇರಿ,‌ ಕೊಪ್ಪಳ, ಹಾಸನ, ಚಿಕ್ಕಮಗಳೂರು, ವಿಜಯಪುರ ಪ್ರಮುಖ ಸ್ಥಳಗಳನ್ನು ಒಳಗೊಂಡಿರುತ್ತದೆ.

ಇದರಲ್ಲಿ ಪ್ರಯಾಣಿಕರನ್ನು ಸೆಳೆಯುವ ಸಲುವಾಗಿ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಫ್ಲೈಬಸ್ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರಿಗೆ ಇಂದಿನಿಂದ ಕೆಎಂಎಫ್​​ ನಂದಿನಿ ಸ್ನ್ಯಾಕ್ ಕಿಟ್ ಸಿಗಲಿದೆ ಎಂದು ಘೋಷಿಸಿರುತ್ತದೆ. ಈ ಹೊಸ ಯೋಜನೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಇಂದು ಅಧಿಕೃತ ಚಾಲನೆ ಸಿಗಲಿದೆ. ಜನರ ಪ್ರಯಾಣವನ್ನು ಇನ್ನಷ್ಟು ಉತ್ತಮಗೊಳಿಸುವುದರ ಜತೆಗೆ ಏರ್​ಪೋರ್ಟ್​ಗೆ ತೆರಳುವ ಬಸ್​ಗಳಲ್ಲೂ ವಿಮಾನ ಪ್ರಯಾಣದ ಮಾದರಿಯಲ್ಲೇ ಆತಿಥ್ಯ ನೀಡಬೇಕೆಂಬ ಗುರಿಯೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಯಾಗಿರುತ್ತದೆ.

ಕರ್ನಾಟಕದ ಪ್ರಸಿದ್ಧ ನಂದಿನಿ ಬ್ರ್ಯಾಂಡ್, ಅದರ ಡೈರಿ ಆಧಾರಿತ ತಿಂಡಿಗಳು ಮತ್ತು ಪಾನೀಯಗಳಿಗೆ ಇನ್ನಷ್ಟು ಪ್ರಚಾರ ದೊರೆಯುವಂತೆ ಮಾಡುವ ಮೂಲಕ ಅವುಗಳ ಉತ್ತೇಜನಕ್ಕೂ ಈ ಉಪಕ್ರಮ ಸಹ ಸಹಾಯ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ, ದಾವಣಗೆರೆಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಹೊಸ ಫ್ಲೈಬಸ್ ಸೇವೆಗೂ ಇಂದು ಚಾಲನೆ ದೊರೆತ್ತಿದ್ದು, ಈ ಕ್ರಮವು ಕೆಎಸ್‌ಆರ್‌ಟಿಸಿಯ ಪ್ರಯಾಣಿಕರ ಸೌಲಭ್ಯಗಳನ್ನು ಸುಧಾರಿಸುವ ಮತ್ತು ಎರಡನೇ ಸ್ತರದ ನಗರಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕವನ್ನು ವಿಸ್ತರಿಸುವ ದೊಡ್ಡ ಗುರಿಗೆ ಪೂರಕವಾಗಿದ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ :Warning : ಸಮೀರ್ ಆಚಾರ್ಯ ಪತ್ನಿ ಶ್ರಾವಣಿಗೆ ಸಾರಿಗೆ ಇಲಾಖೆಯಿಂದ ಖಡಕ್ ವಾರ್ನಿಂಗ್…!

…………

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/Bd7Ce8dJBm0?si=PVqCd6an2dgXSUwk

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 123

You cannot copy content of this page