ಬ್ರೇಕಿಂಗ್ ನ್ಯೂಸ್
ಕರಾವಳಿಪುತ್ತೂರು

Uppinangady: ಆತ್ಮಹತ್ಯೆಗೆ ಯತ್ನಿಸಿದ್ದಾಕೆ ಚಿಕಿತ್ಸೆ ಫಲಿಸದೆ ಮೃತ್ಯು

Uppinangady: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಪುತ್ರಿ ಹರ್ಷಿತಾ (15) ಮೃತಪಟ್ಟ ಬಾಲಕಿ. ನ.12ರಂದು ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ.

ಉಪ್ಪಿನಂಗಡಿಯ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಹರ್ಷಿತಾ, ನವೆಂಬರ್ 4ರಂದು ತಲೆನೋವು ಕಾರಣದಿಂದ ಶಾಲೆಗೆ ಗೈರಾಗಿದ್ದಳು. ಈ ವೇಳೆ ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಳಾಗಿದ್ದಾಳೆ.

ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಮನೆಗೆ ಬಂದು ಅಸ್ವಸ್ಥಳಾದ ಮಗಳನ್ನು ಕಂಡು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನ 12ರಂದು ಮೃತಪಟ್ಟಿದ್ದಾಳೆ.

ಬಾಲಕಿಗೆ ಕಡಬದ ರಾಜೇಶ್ ಎಂಬಾತ ಕರೆ ಮಾಡಿ ಕಿರುಕುಳ ನೀಡಿರುವ ಸಾಧ್ಯತೆ ಇರೋದ್ರಿಂದ, ಈಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ಇದೆ ಎಂದು ಹರ್ಷಿತಾಳ ತಂದೆ ಶ್ರೀಧರ್ ಕುಂಬಾರ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Belthangady: ಬಂಗ್ಲೆಗುಡ್ಡೆ ಬುರುಡೆ ರಹಸ್ಯ ಪ್ರಕರಣ..ಅಫಿಡೆವಿಟ್ ನಲ್ಲಿ ಏನೇನಿದೆ..?

====================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/Bd7Ce8dJBm0?si=PVqCd6an2dgXSUwk

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 36

You cannot copy content of this page