ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕಪುತ್ತೂರು

Atal Virasat: ವಾಜಪೇಯಿ ಜನ್ಮ ಶತಾಬ್ದಿ ಕಾರ್ಯಕ್ರಮಕ್ಕೆ ಪುತ್ತೂರು ರೆಡಿ!

Atal Virasat: ಪುತ್ತೂರಿನಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಅಟಲ್ ವಿರಾಸತ್ ನಡೆಸಲು ಸಕಲ ತಯಾರಿಗಳು ನಡೆಯುತ್ತಿವೆ.

ಇದನ್ನೂ ಓದಿ: ಕಾಲಿವುಡ್‌ ಗೆ ಕಂಬ್ಯಾಕ್ ಆದ ನಟಿ ಮೇಘನಾ ರಾಜ್‌..!

ಪುತ್ತೂರಿನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಅಂಗವಾಗಿ ನ.19 ರಂದು  `ಅಟಲ್ ವಿರಾಸತ್’ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ತಯಾರಿ ನಡೆಯುತ್ತಿದೆ.  ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಹಿನ್ನೆಲೆ ನವಂಬರ್ 19 ರಂದು ಜಿಲ್ಲಾ ಮಟ್ಟದ `ಅಟಲ್ ವಿರಾಸತ್’  ನಡೆಯಲಿದೆ. ಈ ಕಾರ್ಯಕ್ರಮದಲ್ಲಿ  ವಾಜಪೇಯಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: “ಅಕ್ಷಯ” ಏವಿಯೇಷನ್ ವಿಭಾಗದ ಮುಕುಟಕ್ಕೆ ಚಿನ್ನದ ಗರಿ

ಪುತ್ತೂರು ನಗರದ ಲಕ್ಷ್ಮೀ ವೆಂಕಟರಮಣ ದೇವಾಲಯದ ಬಳಿಯ ಮೈದಾನದಲ್ಲಿಕಾರ್ಯಕ್ರಮ ನಡೆಯಲಿದ್ದು,  ಇತಿಹಾಸ ಪ್ರಸಿದ್ಧ ಮಹತೋಭಾರ ಮಹಾಲಿಂಗೇಶ್ವರ ದೇವಾಲಯದಿಂದ ಬೆಳಗ್ಗೆ 9.30 ಕ್ಕೆ  ಕಾರ್ಯಕ್ರಮ ನಡೆಯಲಿದೆ. ಲಕ್ಷ್ಮೀ ವೆಂಕಟರಮಣ ದೇವಾಲಯದ ಬಳಿಯ ಮೈದಾನಕ್ಕೆ ಮೆರವಣಿಗೆ ನಡೆಯಲಿದೆ.

1991 ರಲ್ಲಿ ಏಪ್ರಿಲ್ 14 ರಂದು ಅಟಲ್ ಬಿಹಾರಿ ವಾಜಪೇಯಿ ಅವರು ಪುತ್ತೂರಿಗೆ ಬಂದು ಭಾಗವಹಿಸಿದ ಕಾರ್ಯಕ್ರಮ ನಡೆದ ಸ್ಥಳದಲ್ಲೇ ಜನ್ಮ ಶತಾಬ್ದಿಯ ಕಾರ್ಯಕ್ರಮ ಆಯೋಜಿಸಲಾಗಿದೆ.  ವಾಜಪೇಯಿ ಪುತ್ತೂರಿಗೆ ಒಟ್ಟು 3 ಸಲ ಭೇಟಿ ನೀಡಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ 1980 ರಿಂದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿ ಬಿಜೆಪಿಯನ್ನು ಕಟ್ಟಿ ಬೆಳೆಸಿದವರು.  ಜನ್ಮ ಶತಾಬ್ದಿ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿದ್ದ ಹಿರಿಯರನ್ನು ಗೌರವಿಸುವ ಕೆಲಸವನ್ನು ಈಗಾಗಲೇ ಪಕ್ಷದಿಂದ ಮಾಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ಮುಖಂಡ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಮಂದಿ  ಭಾಗವಹಿಸಲಿದ್ದಾರೆ. ಜಿಲ್ಲಾಮಟ್ಟದ ಕಾರ್ಯಕ್ರಮವಾದರೂ ಪುತ್ತೂರನ್ನು ಆಯ್ಕೆ ಮಾಡಿರುವುದರಿಂದ ಪುತ್ತೂರಿನವರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು. ವಾಜಪೇಯಿ ಅವರು ಹಿಂದೆ ಪುತ್ತೂರಿಗೆ ಬಂದಾಗ ಸೇರಿದಕ್ಕಿಂತ ಹೆಚ್ಚು ಸಂಖ್ಯೆಯ ಕಾರ್ಯಕರ್ತರು ಸೇರಬೇಕು. ಗ್ರಾಮ, ಬೂತ್‌ಗಳಿಂದ ಕಾರ್ಯಕರ್ತರು ಸೇರಬೇಕು. ವಾಹನಗಳ ವ್ಯವಸ್ಥೆ ಆಗಬೇಕು. ಪುತ್ತೂರು ಬಿಜೆಪಿಯಲ್ಲಿರುವ ಒಗ್ಗಟ್ಟು, ಕ್ರಿಯಾಶೀಲತೆ ಮಾದರಿಯಾಗಬೇಕು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 140

You cannot copy content of this page