ಬ್ರೇಕಿಂಗ್ ನ್ಯೂಸ್
ಕರಾವಳಿಮಂಗಳೂರು

Mangaluru: ಕೆಲಸಕ್ಕೆಂದು ಹೋದ ವಿವಾಹಿತೆ ನಾಪತ್ತೆ

Mangaluru: ಮಾಲ್‌ವೊಂದರಲ್ಲಿ ಉದ್ಯೋಗದಲ್ಲಿದ್ದ ವಿವಾಹಿತೆ ನಾಪತ್ತೆಯಾದ ಘಟನೆ ನಡೆದಿದೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ.

ಜಪ್ಪು ಸೂಟರ್ ಪೇಟೆ ನಿವಾಸಿ ಕುಮಾರ್ ಇವರ ಪತ್ನಿ ಸುಮಾ ಎನ್. (24) ನಾಪತ್ತೆಯಾದ ಯುವತಿ, ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ಕೆಲಸಕ್ಕೂ ಹೋಗದೆ, ಮನೆಗೂ ಬಾರದೆ, ಸಂಬಂಧಿಕರ ಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ.

ಸುಮಾ ಅವರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲು ಮನೆಯಿಂದ ಹೊರಟಿದ್ದರು. ಆದರೆ ಮಾಲ್‌ಗೆ ಹೋಗಿರಲಿಲ್ಲ. ಅವರ ಪತಿ ಕುಮಾರ್ ಅವರು ಸುಮಾ ಅವರಿಗೆ ಕರೆ ಮಾಡಲು ಪ್ರಯತ್ನಿಸಿದ್ದಾರೆ. ಆಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ನಂತರ ಸಂಬಂಧಿಕರು, ಸ್ನೇಹಿತರ ಬಳಿ ವಿಚಾರಿಸಿದಾಗ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಹಿನ್ನಲೆ, ಕುಮಾರ್ ಅವರು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.

ಸುಮಾ ಅವರು ಸರಿಸುಮಾರು 5 ಅಡಿ ಎತ್ತರ, ಮಧ್ಯಮ ಮೈ ಕಟ್ಟು ಮತ್ತು ಗೋಧಿ ಬಣ್ಣ ಹೊಂದಿದ್ದಾರೆ. ಮನೆಯಿಂದ ಹೊರಡುವಾಗ ಕಪ್ಪು ಪ್ಯಾಂಟ್ ಮತ್ತು ಕಪ್ಪು ಉದ್ದ ತೋಳಿನ ಶರ್ಟ್ ಧರಿಸಿದ್ದರು. ಕನ್ನಡ, ತುಳು ಮತ್ತು ಹಿಂದಿ ಭಾಷೆಗಳಲ್ಲಿ ಮಾತನಾಡುತ್ತಾರೆ ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Atal Virasat: ವಾಜಪೇಯಿ ಜನ್ಮ ಶತಾಬ್ದಿ ಕಾರ್ಯಕ್ರಮಕ್ಕೆ ಪುತ್ತೂರು ರೆಡಿ!

===================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 36

You cannot copy content of this page