ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕ

Menstrual Leave: ಮಹಿಳಾ ನೌಕರರಿಗೆ ತಿಂಗಳಿಗೆ 1 ದಿನ ಋತುಚಕ್ರದ ರಜೆ, ಕಂಡೀಷನ್ಸ್ ಏನು..?

Menstrual Leave: ರಾಜ್ಯದ  ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, MNC ಗಳು, IT ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು 1 ದಿನದ ಋತುಚಕ್ರದ ರಜೆ ನೀಡಲು ಸರ್ಕಾರ ಆದೇಶ ನೀಡಿದೆ.

 1 ದಿನ ಋತುಚಕ್ರದ ರಜೆ, ಆದ್ರೆ ಕಂಡೀಷನ್ಸ್‌ ಏನು ಗೊತ್ತಾ..?

ರಾಜ್ಯದ ಮಹಿಳಾ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿರುವುದು ಗೊತ್ತೇ ಇದೆ. ತಿಂಗಳ ಒಂದು ದಿನ ಋತುಚಕ್ರದ ಸಮಯದಲ್ಲಿ
ವೇತನ ಸಹಿತ ರಜೆ ಸೌಲಭ್ಯವನ್ನು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.  2025  ಅ.9ರಂದು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು.

ಈ ಸಂಬಂಧ  ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದ್ದು,  ವಾರ್ಷಿಕವಾಗಿ 12 ದಿನಗಳ ರಜೆ ನೀಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ತಿಂಗಳಿಗೆ ಒಂದು ಋತುಚಕ್ರದ ರಜೆ ಘೋಷಿಸುತ್ತಿದ್ದು,  ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾ‌ರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೈರ್ಯವನ್ನು ಹೆಚ್ಚಿಸುವ ಸದುದ್ದೇಶದಿಂದ ತಿಂಗಳಿಗೆ ಒಂದು ರಜೆ ನೀಡಲಾಗುತ್ತದೆ. ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯ ನೀಡಬೇಕು ಎಂದು ಆದೇಶ ನೀಡಲಾಗಿದೆ.

ಆಯಾ ತಿಂಗಳ ರಜೆ ಮುಂದಿನ ತಿಂಗಳು ತಗೊಳ್ಳುವ ಹಾಗಿಲ್ಲ!

ಮಹಿಳಾ ನೌಕರರು ಆಯಾ ತಿಂಗಳಿನಲ್ಲಿಯೇ  ರಜೆಯನ್ನು ಬಳಸಿಕೊಳ್ಳಬೇಕು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ. ಪ್ರತಿ ತಿಂಗಳು ಒಂದು ದಿನದ ʼಋತುಚಕ್ರ ರಜೆʼ ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇಲ್ಲ. ಖಾಯಂ, ಗುತ್ತಿಗೆ, ಹೊರಗುತ್ತಿಗೆ ಎಲ್ಲಾ ಮಾದರಿಯ ಆಧಾರದಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಇದು ಅನ್ವಯವಾಗಲಿದೆ.. ಈ ಹಿನ್ನೆಲೆಯಲ್ಲಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಋತುಚಕ್ರ ರಜೆ ಸೌಲಭ್ಯ ಜಾರಿಗೆ ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದ್ದು, ಮಹಿಳಾ ನೌಕರರು ಸಂತಸ ವ್ಯಕ್ತಪಡಿಸಿದ್ದಾರೆ.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 168

You cannot copy content of this page