Dharmasthala: ಪುಣ್ಯಕ್ಷೇತ್ರ ಧರ್ಮಸ್ಥಳ ಮಂಜುನಾಥ ದೇವಾಲಯದಲ್ಲಿ ಇದೇ ಮುಂಬರುವ ನವೆಂಬರ್ 15 ರಿಂದ 19ರವರೆಗೆ ಲಕ್ಷದೀಪೋತ್ಸವ ಅದ್ಧೂರಿಯಾಗಿ ನಡೆಯಲಿದೆ.
ಇದನ್ನೂ ಓದಿ: ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಸುವರ್ಣ ಮಹೋತ್ಸವದ ಸಂಭ್ರಮ!
ಕಾರ್ತಿಕ ಮಾಸದ ಸಂದರ್ಭದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದ್ದು, ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ವೈಭವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನವು ನವೆಂಬರ್ 18ರಂದು ಸಂಜೆ 5ರಿಂದ ನಡೆಯಲಿದೆ. ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಅಧಿವೇಶನ ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ: ಮಹಿಳಾ ನೌಕರರಿಗೆ ತಿಂಗಳಿಗೆ 1 ದಿನ ಋತುಚಕ್ರದ ರಜೆ, ಕಂಡೀಷನ್ಸ್ ಏನು..?
ಲಕ್ಷದೀಪೋತ್ಸವದಲ್ಲಿ ಏನೇನು ಕಾರ್ಯಕ್ರಮಗಳು ಇರಲಿವೆ..?
ಹರಿಹರಪುರದ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದು, ಪತ್ರಕರ್ತ ಎ.ಸೂರ್ಯಪ್ರಕಾಶ್ ಪಂಡಿತ್, ಅಂಕಣಕಾರ ತನ್ನೀರ್ ಅಹಮ್ಮದ್ ಉಲ್ಲಾ ಉಪನ್ಯಾಸ ನೀಡಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ 8.30ರಿಂದ ಚೆನ್ನೈನ ಶ್ರೀದೇವಿ ನೃತ್ಯಾಲಯದ ಕಲಾವಿದರಿಂದ ಭರತನಾಟ್ಯ ಕ ಪ್ರದರ್ಶನ ನಡೆಯಲಿದೆ. ರಾತ್ರಿ ಕಂಚಿಮಾರು ಕಟ್ಟೆ ಉತ್ಸವ ನಡೆಯಲಿದ್ದು ಕಾರ್ಯಕ್ರಮಗಳನ್ನು ನೋಡಲು ಜನ ಕಾಯುತ್ತಿದ್ದಾರೆ.
ನ. 20ರ ಮುಂಜಾನೆ ದೀಪ ಸಮಾಪನ..!
ನವೆಂಬರ್ 19ರಂದು ಸಂಜೆ 5 ಗಂಟೆಗೆ ಸಾಹಿತ್ಯ ಸಮ್ಮೇಳನದ 93ನೇ ಅಧಿವೇಶನವನ್ನು ಹಿರಿಯ ಸಾಹಿತಿ ಪ್ರೊ.ಪ್ರೇಮಶೇಖರ ಉದ್ಘಾಟಿಸುವರು. ಪತ್ರಕರ್ತ ವಿಶ್ವೇಶ್ವರ ಭಟ್ ಅಧ್ಯಕ್ಷತೆ ವಹಿಸಕಿದ್ದು, ಲೇಖಕಿ ಶಾಂತಾ ನಾಗಮಂಗಲ, ವಿವೇಕಹಂಸ ಮಾಸಪತ್ರಿಕೆಯ ಸಂಪಾದಕ ರಘು ವಿ, ಸಾಹಿತಿ ಬಿ.ಎಂ.ಶರಭೇಂದ್ರ ಸ್ವಾಮಿ ಉಪನ್ಯಾಸ ನೀಡಲಿದ್ದಾರೆ.
ಇದನ್ನೂ ಓದಿ: ವಾಜಪೇಯಿ ಜನ್ಮ ಶತಾಬ್ದಿ ಕಾರ್ಯಕ್ರಮಕ್ಕೆ ಪುತ್ತೂರು ರೆಡಿ!
ಬೆಂಗಳೂರಿನ ರಾಹುಲ್ ವೆಲ್ಟಾಲ್ ಮತ್ತು ಬಳಗದವರಿಂದ ರಾತ್ರಿ 8.30ರಿಂದ ಸಂಗೀತ ಕಾರ್ಯಕ್ರಮವಿದೆ. ರಾತ್ರಿ 9.45ರಿಂದ ದಕ್ಷಯಜ್ಞ ಯಕ್ಷಗಾನ ಪ್ರದರ್ಶನವಿದೆ. ರಾತ್ರಿ 12 ಗಂಟೆ ಬಳಿಕ ಗೌರಿಮಾರುಕಟ್ಟೆ ಲಕ್ಷದೀಪೋತ್ಸವ ನಡೆಯಲಿದೆ. 20ರ ಮುಂಜಾನೆ ಲಕ್ಷ ದೀಪೋತ್ಸವ ಸಮಾಪನಗೊಳ್ಳುತ್ತದೆ. ವಿವಿಧ ಭಾಗಗಳಿಂದ ಲಕ್ಷ ದೀಪೋತ್ಸವವನ್ನು ಕಣ್ತುಂಬಿಕೊಳ್ಳಲು ಬರಲಿದ್ದಾರೆ. ಜೊತೆಗೆ ಚೆಂಡೆ, ಕೊಂಬು, ಕಹಳೆ, ವಾಲಗ, ನಾಗಸ್ವರ ಮೊದಲಾದ ಸಾವಿರಾರು ಕಲಾವಿದರು ರಾತ್ರಿ ಇಡೀ ಕಲಾಸೇವೆ ಮಾಡಲಿದ್ದಾರೆ ಎನ್ನಲಾಗಿದೆ.
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











