ಬ್ರೇಕಿಂಗ್ ನ್ಯೂಸ್
ಕರ್ನಾಟಕ

Bangalore : ‘ನಾಳೆ ರಜೆ’ ; ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು

Bangalore : ಪದ್ಮಶ್ರೀ ಪುರಸ್ಕೃತ ಹಾಗೂ ವೃಕ್ಷ ಮಾತೆ ಎಂದೇ ಕರೆಯಲ್ಪಡುವ ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ಕೇಳುತ್ತಿದ್ದಂತೆ ಪ್ರತಿಯೊಬ್ಬರೂ ದುಃಖತ್ರಪ್ತರಾಗಿರುತ್ತಾರೆ. ಆದರೆ, ಈ ಹಿನ್ನಲೆ ನಾಳೆ ಸರ್ಕಾರಿ ಘೋಷಣೆ ಮಾಡಿರುವುದೆಂದು ಕೆಲ ಜನರು ಸುಮ್ಮಸುಮ್ಮನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುತ್ತಾರೆ. ಆದರೆ, ನಾಳೆ ರಜೆ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನಡೆಯಲಿದ್ದು, ನಾಳೆ ಸರ್ಕಾರಿ ರಜೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಿರುಚಿದ ಸರ್ಕಾರಿ ಆದೇಶ ಪತ್ರವನ್ನು ಕಿಡಿಗೇಡಿಗಳು ಹರಿಬಿಟ್ಟಿರುವುದು ಸುಳ್ಳು ಸುದ್ದಿಯಾಗಿದೆ. ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ನಿಧನದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಕಿಡಿಗೇಡಿಗಳು ತಿರುಚಿದ್ದಾರೆ.

ಬೆಂಗಳೂರಿ‌ನ ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಬೆಳಗ್ಗೆ 7.30ರಿಂದ 10.30ರವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಗೂ ನಾಳೆ ಮಧ್ಯಾಹ್ನ 12 ಗಂಟೆಗೆ ಜ್ಞಾನ ಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ :Mangaluru: ರಸ್ತೆಯಲ್ಲಿ ಹೊತ್ತಿ ಉರಿದ ಕಾರು

…………..

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/QFVPc6vbTkc?si=ZwhPG1ZjmTJnAsCx

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 210

You cannot copy content of this page