Shrinagara: ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ ಭೀಕರತೆ ಮಾಸುವ ಮುನ್ನವೇ ಕಾಶ್ಮೀರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಉಂಟಾದ ಭೀಕರ ಸ್ಫೋಟದಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ರಾತ್ರಿ 11:22 ಸುಮಾರಿಗೆ ಸ್ಫೋಟ ಸಂಭವಿಸಿದೆ. ಈವರೆಗೆ 7 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದ್ದು, ಸಾವಿನ ಸಂಖ್ಯೆ ನಿಖರವಾಗಿ ತಿಳಿದುಬಂದಿಲ್ಲ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭೀಕರ ಸ್ಫೋಟದ ಶಬ್ಧಕ್ಕೆ ಸುತ್ತಮುತ್ತಲಿನ ಜನ ಬೆಚ್ಚಿಬಿದ್ದಿದ್ದಾರೆ. ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿದೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಯ ಕಿಟಕಿ ಗಾಜುಗಳು ಹಾನಿಯಾಗಿದೆ. ಜೊತೆಗೆ ಮಾನವ ದೇಹದ ಅವಶೇಷಗಳು ಸರಿಸುಮಾರು 300 ಅಡಿ ದೂರದವರೆಗೆ ಚದುರಿತ್ತು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.
ನೌಗಮ್ ಪೊಲೀಸ್ ಠಾಣೆಯಲ್ಲೇ ಸಂಗ್ರಹಿಸಲಾಗಿದ್ದ ಸುಮಾರು 360 KGಯಷ್ಟು ಅಮೋನಿಯಂ ನೈಟ್ರೇಟ್ ಸ್ಫೋಟಕ ವಸ್ತುಗಳನ್ನ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಸೀಲ್ ಮಾಡುವಾಗ ಸ್ಫೋಟಗೊಂಡಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ತನಿಖಾ ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸ್ ಇಲಾಖೆಯ ಪಿತೂರಿ ಅಥವಾ ಅಧಿಕಾರಿಗಳ ನಿರ್ಲಕ್ಷ್ಯ ಎಂಬ ಎರಡು ಆಯಾಮಗಳಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿವೆ. ಸ್ಫೋಟದ ತೀವ್ರತೆಗೆ ಪೊಲೀಸ್ ಠಾಣೆಯಿಂದ ಭಾರಿ ಪ್ರಮಾಣದ ಹೊಗೆ ಮತ್ತು ಜ್ವಾಲೆಗಳು ಹೊರಬರುತ್ತಿರುವುದು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಲ್ಲಿ ಕಾಣಿಸಿವೆ.
ಇದನ್ನೂ ಓದಿ: Food : ಸಿಹಿಗೆಣಸಿನ ಕಟ್ಲೇಟ್ ಚಳಿಗಾಲಕ್ಕೆ ಉತ್ತಮ….!
==============
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/QFVPc6vbTkc?si=ZwhPG1ZjmTJnAsCx











