ಬ್ರೇಕಿಂಗ್ ನ್ಯೂಸ್
ಕರಾವಳಿಬಂಟ್ವಾಳ

BC Road: ಸರ್ಕಲ್‌ಗೆ ಕಾರು ಢಿಕ್ಕಿ – ಇಬ್ಬರು ಮೃತ್ಯು

BC Road: ಸರ್ಕಲ್‌ಗೆ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇನ್ನೋವಾ ಕಾರೊಂದು ಬೆಂಗಳೂರಿನಿಂದ ಮಂಗಳೂರು ಕಡೆ ಬರುತ್ತಿತ್ತು. ಈ ವೇಳೆ ಬಿಸಿ ರೋಡಿನ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದಿದೆ.

ಢಿಕ್ಕಿ ಹೊಡೆದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ 5ರ ವೇಳೆಗೆ ಘಟನೆ ಸಂಭವಿಸಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರು ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಮೃತರ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಅಪಘಾತದಿಂದ ಕಾರು ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Srinagara: ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಪೋಟ – 7 ಮಂದಿ ಮೃತ್ಯು

=============

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :  https://www.youtube.com/@tulutimess 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 31

You cannot copy content of this page