Bengaluru: ಸಿನಿಮಾ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ಆರೋಪ ನೀಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಉದ್ಯಮಿ ಅರವಿಂದ್ ರೆಡ್ಡಿ ನಟಿಯ ವಿರುದ್ಧ ಆರೋಪ ಮಾಡಿದ್ದಾರೆ.
ಅರವಿಂದ್ ರೆಡ್ಡಿ ಹಾಗೂ ನಟಿ ಲಿಂಕ್ ಹೇಗೆ..?
2021ರಲ್ಲಿ ಪರಿಚಯವಾಗಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಎವಿಆರ್ ಗ್ರೂಪ್ ಮಾಲೀಕನಾಗಿದ್ದ ಅರವಿಂದ್ ರೆಡ್ಡಿ ನಟಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇದೀಗ ಪೊಲೀಸರು ನಟೆಸಿದ ವಿಚಾರಣೆ ವೇಳೆ, ಉದ್ಯಮಿ ಕೆಲವೊಂದು ಸತ್ಯಗಳನ್ನು ಬಾಯಿ ಬಿಟ್ಟಿದ್ದಾರೆ. ನಾನು 3 ಕೋಟಿ ಖರ್ಚು ಮಾಡಿ, ಸೈಟ್, ಕಾರು ಕೊಡ್ಸಿದ್ದೆ, ಆದ್ರೆ ಅವ್ಳು ಬೇರೆಯವನ ಜೊತೆ ಕಾಣಿಸಿಕೊಳ್ತಿದ್ಲು ಎಂದು ನಟಿ ವಿರುದ್ಧ ಅರವಿಂದ್ ರೆಡ್ಡಿ ಆರೋಪ ಮಾಡಿದ್ದಾರೆ.
ನಾನಲ್ಲ ಅವಳೇ ನನಗೆ ಮೋಸ ಮಾಡಿದ್ದಾಳೆ..!
ಗೋವಿಂದರಾಜನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸುಬ್ರಹ್ಮಣಿ ಆರೋಪಿಯ ವಿಚಾರಣೆ ನಡೆಸಿದ್ದಾರೆ, ಈ ವೇಳೆ ಅರವಿಂದ್ ರೆಡ್ಡಿ, ನಟಿಗಾಗಿ ನಾನು ಮೂರು ಕೋಟಿ ರೂ. ಹಣ ಖರ್ಚು ಮಾಡಿದ್ದೇನೆ. ಸೈಟ್, ಮನೆ ಕೊಡಿಸಿದ್ದೇನೆ. ದುಬಾರಿ ಕಾರು ಗಿಫ್ಟ್ ಮಾಡಿದ್ದೇನೆ. ಆದರೆ ಅವಳು ನನ್ನ ಬಿಟ್ಟು ಬೇರೆ ವ್ಯಕ್ತಿ ಜೊತೆಗೆ ಕಾಣಿಕೊಳ್ಳುತ್ತಿದ್ದಳು. ನಾನು ಯಾವುದೇ ಕಿರುಕುಳ ನೀಡಿಲ್ಲ, ಅವಳೇ ನನಗೆ ಮೋಸ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ. ಇನ್ನು ಈ ಪ್ರಕರಣದ ಆರೋಪಿ ಬಂಧನಕ್ಕೆ ಎಸಿಪಿ ಚಂದನ್ ಮತ್ತು ಸುಬ್ರಹ್ಮಣಿ ತಂಡ ರಚಿಸಲಾಗಿತ್ತು. ಇಂದುಬೆಳಗ್ಗೆ ಶ್ರೀಲಂಕಾದಿಂದ ಬರುವಾಗ ಆರೋಪಿಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಲಾಗಿದೆ.
ಅರವಿಂದ್ ರೆಡ್ಡಿ ಯಾರು..?
ಚಲನಚಿತ್ರ ನಿರ್ಮಾಪಕ ಆಗಿರುವ ಅರವಿಂದ್ ರೆಡ್ಡಿ ಸಿನಿಮಾ ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡಿದ್ದವರು. ಚಲನಚಿತ್ರ ನಟ, ನಟಿಯರಿಗಾಗಿಯೇ ಕ್ರಿಕೆಟ್ ಪಂದ್ಯಾವಳಿ ಕೂಡ ಆಯೋಜಿಸಿದ್ದರು. ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ರೆಡ್ಡಿ ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ಮಾಲೀಕನಾಗಿದ್ದರು ಎನ್ನಲಾಗಿದೆ.
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











