ಬ್ರೇಕಿಂಗ್ ನ್ಯೂಸ್
ಕರ್ನಾಟಕ

Bengaluru: ಮಣ್ಣಲ್ಲಿ ಮಣ್ಣಾದ ವೃಕ್ಷಮಾತೆ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

Bengaluru: ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ಬೆಂಗಳೂರಿನ ಜ್ಞಾನಭಾರತಿ ಕಲಾಗ್ರಾಮದಲ್ಲಿ ನಡೆದಿದೆ. ಶತಾಯುಷಿಯಾಗಿ ಬಾಳಿ ಬದುಕಿದ್ದ ತಿಮ್ಮಕ್ಕ ಮಣ್ಣಲ್ಲಿ ಮಣ್ಣಾಗಿದ್ದು, ಇನ್ನೂ ನೆನಪು ಮಾತ್ರ.

ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗ , 114 ವರ್ಷದ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಿತು. ಈ ವೇಳೆ ಮೂರು ಸುತ್ತು ಕುಶಾಲತೋಪು ಸಿಡಿಸಿ ಪೊಲೀಸರು ತಿಮ್ಮಕ್ಕ ಅವರಿಗೆ ವಿಶೇಷ ಗೌರವ ಸಲ್ಲಿಸಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್, ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಗಣ್ಯರು ವೃಕ್ಷಮಾತೆಗೆ ಅಂತಿಮ ಗೌರ್ವ ನಮನ ಸಲ್ಲಿಸಿದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ತಿಮ್ಮಕ್ಕ ಅವರನ್ನು ಎರಡು ದಿನಗಳ ಹಿಂದಷ್ಟೇ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದರು.

ತಿಮ್ಮಕ್ಕನವರು ತಮಗೆ ಮಕ್ಕಳಿಲ್ಲದ ಕಾರಣ, ರಸ್ತೆಯ ಇಕ್ಕೆಲಗಳಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಅಪ್ರತಿಮ ಪರಿಸರವಾದಿ. ಪರಿಸರ ಸಂರಕ್ಷಣೆಯಲ್ಲಿ ಮಹತ್ವದ ಕಾರ್ಯ ಮಾಡಿದ್ದ ಇವರಿಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳೂ ಅರಸಿ ಬಂದಿದ್ದವು.

ಇದನ್ನೂ ಓದಿ: Madikeri Protest: ಅನುಮತಿ ನಿರಾಕರಣೆ ನಡುವೆಯೂ ಮಡಿಕೇರಿಯಲ್ಲಿ ಹಿಂ.ಜಾ.ವೇ ಪ್ರತಿಭಟನೆ..!

==========

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess 

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 152

You cannot copy content of this page