ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

CM Siddaramaiah: ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ ಸಿದ್ದರಾಮಯ್ಯ..!

CM Siddaramaiah: ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಸೋನಿಯಾಗಾಂಧಿ  ಅವರನ್ನು ಭೇಟಿಯಾಗಿದ್ದಾರೆ.

ಈ ಭೇಟಿಯ ಬಗ್ಗೆ ಹಲವಾರು ಪ್ರಶ್ನೆಗಳು ಎದ್ದಿದ್ದು,  ಸಿಎಂ ಬದಲಾವಣೆಯೋ, ಅಥವಾ ಸಂಪುಟ ಪುನರ್ ರಚನೆಯೋ ಎಂಬ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಿಎಂ ಬದಲಾವಣೆ ಬಗ್ಗೆ ಹೈಕಮ್ಯಾಂಡ್ ಏನ್ ತೀರ್ಮಾನ ಕೈಗೊಳ್ಳುತ್ತೆ ಎಂಬ ಕುತೂಹಲ ಇದೆ. ದೆಹಲಿಯಲ್ಲಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ, ರಾಜ್ಯ ಕ್ಯಾಬಿನೆಟ್ ಪುನರ್ ರಚನೆಗೆ ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ.

ಸಿಎಂ ಸ್ಥಾನ ಬದಲಾವಣೆ ಆಗುತ್ತಾ..?

ಸಿಎಂ ಸಿದ್ದರಾಮಯ್ಯ  ಜನಪಥ್ , 10 ನೇ ನಂಬರ್ ನಿವಾಸಕ್ಕೆ ತೆರಳಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಇದು ಒಂದು ದಿನದ ಭೇಟಿಯಾಗಿದೆ.  ಇನ್ನು ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಜೊತೆಗೆ ರಾಜ್ಯದ ಸಚಿವ ಸಂಪುಟದ ಪುನರ್ ರಚನೆಯ ಬಗ್ಗೆ ವಿಸ್ತೃತ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಹೈಕಮ್ಯಾಂಡ್ ನಾಯಕರಾದ ಸೋನಿಯಾಗಾಂಧಿ ಜೊತೆ  ಸಚಿವ ಸಂಪುಟ ಪುನರ್ ರಚನೆಗೆ ಒಪ್ಪಿಗೆ ನೀಡಬೇಕೆಂದು ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಸಚಿವ ಸಂಪುಟ ಪುನರ್ ರಚನೆಗೆ ಹೈಕಮ್ಯಾಂಡ್ ಒಪ್ಪಿಗೆ ನೀಡಿದರೇ, ಸಿಎಂ ಬದಲಾವಣೆ ಇಲ್ಲಅನ್ನೋದು ಸ್ಪಷ್ಟವಾಗುತ್ತದೆ. ನಂತರ ಮುಂದಿನ ಎರಡೂವರೆ ವರ್ಷಗಳಿಗೂ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ.

ಹೈಕಮಾಂಡ್‌ ನಿರ್ಧಾರದ ಮೇಲೆ ಎಲ್ಲರ ಕಣ್ಣು..!

ಇನ್ನು ಡಿಸಿಎಂ ಡಿಕೆಶಿ ಬಣ ಈಗ ಯಾವುದೇ ಸಚಿವ ಸಂಪುಟ ಪುನರ್ ರಚನೆ ಬೇಡ. ನೇರವಾಗಿ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಿ, ಸಿಎಂ ಸ್ಥಾನವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ನೀಡಬೇಕೆಂದು ಪಟ್ಟು ಹಿಡಿದಿದೆ. ಸಿಎಂ ಸಿದ್ದರಾಮಯ್ಯ ಪರವಾಗಿ ರಾಹುಲ್ ಗಾಂಧಿ ಇದ್ದರೇ, ಡಿಕೆಶಿ ಪರವಾಗಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಇದ್ದಾರೆ. ಅಂತಿಮವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆಗೆ ಚರ್ಚೆ ಮಾಡಿ ಕಾಂಗ್ರೆಸ್ ಹೈಕಮ್ಯಾಂಡ್ ತೀರ್ಮಾನ ತಿಳಿಸಲಿದೆ. ಸದ್ಯ ಈಗ ಕಾಂಗ್ರೆಸ್ ಹೈಕಮ್ಯಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 177

You cannot copy content of this page