ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಪುತ್ತೂರು ಸಹಾಯಕ ಆಯುಕ್ತರು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಈಗ ಹೈಕೋರ್ಟ್ ರದ್ದುಪಡಿಸಿದೆ.
ಸೆಪ್ಟಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಅವರು ಮಹೇಶ್ ಶೆಟ್ಟಿಯವರನ್ನು ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ.
ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಪೀಠವು, ತಿಮರೋಡಿಯವರ ಗಡಿಪಾರು ಆದೇಶ ರದ್ದುಪಡಿಸಿದೆ. ಇದೇ ವೇಳೆ, ಪ್ರಕರಣವನ್ನು ಹೊಸದಾಗಿ ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವಂತೆ ಎರಡನೇ ಪ್ರತಿವಾದಿಯಾದ ಪುತ್ತೂರು ಸಹಾಯಕ ಆಯುಕ್ತರಿಗೆ ನ್ಯಾಯಪೀಠ ನಿರ್ದೇಶಿಸಿದ್ದಾಗಿ ತಿಳಿದುಬಂದಿದೆ. ವಿಸ್ತೃತ ತೀರ್ಪಿನ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ: Kadaba: ಮಹಿಳೆಗೆ ಲೈಂಗಿಕ ಕಿರುಕುಳ ಯತ್ನ – ಆರೋಪಿ ಅರೆಸ್ಟ್
=============
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











