ಬ್ರೇಕಿಂಗ್ ನ್ಯೂಸ್
ಕರ್ನಾಟಕ

Cyber Crime : ಸೈಬರ್ ವಂಚನೆಗೆ ಕ್ರಮಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ…!

Cyber Crime : ಸೈಬರ್ ಅಪರಾಧಗಳು ಹೆಚ್ಚಾಗುತ್ತಲೇ ಇವೆ. ಹೊಸ ಹೊಸ ಲಿಂಕ್ ಕ್ರಿಯೇಟ್ ಮಾಡೋದು ನಂತರ ವೈಯಕ್ತಿಕ ಡಿಟೇಲ್ಸ್ ಕದಿಯೋದು ಸಾಮಾನ್ಯವಾಗಿ ಬಿಟ್ಟಿದೆ. ಅದರಲ್ಲೂ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ಸೈಬರ್ ವಂಚನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ರಾಜ್ಯ ಸರ್ಕಾರವು ಮಹತ್ವದ ಕ್ರಮ ತೆಗೆದುಕೊಳ್ಳುವುದಕ್ಕೆ ಮುಂದಾಗಿದೆ. ಮುಖ್ಯವಾಗಿ ಇಲ್ಲಿ ನಡೆಸುವ ವಂಚನೆಯಲ್ಲಿ ಭಯ ಹುಟ್ಟಿಸಿ, ಬೆದರಿಕೆಯನ್ನು ಹಾಕಿ ಹಣ ಕಸಿದುಕೊಳ್ಳುವ ಕಥೆಯೇ ಹೆಚ್ಚು. ಮೊದ ಮೊದಲು ಅಲ್ಲೊಂದು ಇಲ್ಲೊಂದು ಕೇಳಿಬರುತ್ತಿದ್ದ ವಂಚನೆಗಳು ಈಗ ಸಾಮಾನ್ಯವಾಗಿಬಿಟ್ಟಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಸೈಬರ್ ವಂಚನೆ ಹಾಗೂ ಆನ್‌ಲೈನ್‌ ಲೈಂಗಿಕ ಕಿರುಕುಳ ಕಡಿವಾಣಕ್ಕೆ ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಮುಂದಾಗಿವೆ.

ಸುಮಾರು 180 ಕ್ಕಿಂತ ಹೆಚ್ಚು ಬಾರಿ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಯಾಗಿದೆ. ಇಷ್ಟೆಲ್ಲಾ ವಂಚನೆಯಾದ ಬಳಿಕ ಎಚ್ಚೆತ್ತುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ ಎಂದರೆ, ಸೈಬರ್ ವಂಚಕರು ಎಷ್ಟರ ಮಟ್ಟಿಗೆ ಹೆದರಿಸಬಹುದು. ಈ ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಇದೇ‌ ಮೊದಲು. ಬೆಂಗಳೂರಿನಲ್ಲಿದ್ದುಕೊಂಡು ಅಮೆರಿಕಾದಲ್ಲಿದ್ದವರಿಗೆ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಮಾಡಿರುವ ಪ್ರಕರಣಗಳ ಆರೋಪಿಗಳನ್ನು ಪತ್ತೆ ಹಚ್ಚಿದ್ದೇವೆ. ಈ ಪ್ರಕರಣವನ್ನು ಪತ್ತೆಹಚ್ಚುತ್ತೇವೆ ಎಂದು ಹೇಳಿದರು. ಆದಷ್ಟು ಬೇಗ ಈ ವಂಚಿತರಾದವರಿಗೆ ನ್ಯಾಯ ಒದಗಿಸಿದರೆ ಅಥವಾ ವಂಚನೆಗೆ ಒಳಗಾಗದಂತೆ ಕ್ರಮ ಕೈಗೊಂಡರೆ ಉತ್ತಮ ಎಂಬುದು ಜನರ ಬೇಡಿಕೆಯಾಗಿದೆ.

ಇದನ್ನೂ ಓದಿ :Puttur: ಕೋಡಿಂಬಾಡಿ ಬಾರ್‌ನಲ್ಲಿ ಮಾರಾಮಾರಿ: ಪ್ರಕರಣ ಮುಚ್ಚಿ ಹಾಕಲು ಯತ್ನ!?

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/vXhwD33EPDk?si=9-p-hEdxSIH5NIgZ

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page