Karkala : ಈಗಾಗಲೇ ಸುದ್ದಿಯಲ್ಲಿರುವ ಪುರುಷೋತ್ತಮ ಬಿಳಿಮಲೆ ಅವರ ಹೇಳಿಕೆ ಮತ್ತಷ್ಟು ತೀವ್ರಗತಿಯನ್ನು ತಲುಪಿದ್ದು, ಯಕ್ಷಗಾನ ಒಂದು ದೈವಿಕ ಕಲೆ. ದಕ್ಷಿಣೋತ್ತರ ಕನ್ನಡದ ಸಾವಿರಾರು ಕಲಾವಿದರು ವ್ಯವಸಾಯಿ ಮೇಳ ಹಾಗೂ ಹವ್ಯಾಸಿ ಕಲಾವಿದರಾಗಿ ತಮ್ಮನ್ನು ತೊಡಗಿಸಿಕೊಂಡಿದ್ದು, ತಮ್ಮ ಹೇಳಿಕೆಯಿಂದ ಒಂದು ಕಲಾಪ್ರಕಾರವನ್ನೇ ಅಸಹ್ಯವಾಗಿಸುವ ಪ್ರಯತ್ನವನ್ನು ಬಿಳಿಮಲೆ ನಡೆಸಿದ್ದಾರೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ಮಾಜಿ ಸಚಿವ ವಿ. ಸುನೀಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಯಕ್ಷಗಾನದಲ್ಲಿ ಸಲಿಂಗ ಕಾಮ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಪಾದಿಸಿರುವುದು ಕನ್ನಡದ ಶ್ರೀಮಂತ ಕಲಾಪ್ರಕಾರಕ್ಕೆ ಮಾಡಿದ ಅಪಮಾನವಾಗಿದ್ದು ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಬೇಕೆಂದು ಹೇಳಿರುವುದು ವರದಿಯಾಗಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಇಂಥ ಹೇಳಿಕೆ ನೀಡುವಾಗ ಎಚ್ಚರಿಕೆ ವಹಿಸಬೇಕಾಗಿತ್ತು. ಸ್ಥಾನ ಗೌರವವನ್ನು ಅರಿಯಬೇಕಿತ್ತು. ಈ ಬೇಜವಾಬ್ದಾರಿ ವರ್ತನೆಗಾಗಿ ಸರ್ಕಾರ ಅವರನ್ನು ತಕ್ಷಣ ಪ್ರಾಧಿಕಾರದ ಜವಾಬ್ದಾರಿಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಹಿಂದೆ ಹುತಾತ್ಮ ಸೈನಿಕರ ಜಾತಿ ಹುಡುಕಿ ವಿವಾದ ಸೃಷ್ಟಿಸಿದ್ದ ಬಿಳಿಮಲೆಯವರು ಈಗ ಯಕ್ಷಗಾನ ಕಲಾವಿದರ ಬಗ್ಗೆ ಹೇಳಿರುವುದು,. ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಕ್ಕೆ ಸಾಧ್ಯವಿಲ್ಲ. ಇದು ಇಡೀ ಕಲಾ ಪ್ರಕಾರವನ್ನು ಮುಜುಗರಕ್ಕೆ ದೂಡುವ ಕೃತ್ಯ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ :Madikeri: ವಿಶ್ವ ಪರಂಪರಾ ಸಪ್ತಾಹಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ !
…….
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/hqiJ72PldCg?si=XZWaH3m-eQSXIODa











